ADVERTISEMENT

ವಿಕಸಿತ ಭಾರತ ಗುರಿ ಸಾಧನೆಗೆ ‘ವಿಕಸಿತ ಮಹಾರಾಷ್ಟ್ರ’ದ ಪರಿಕಲ್ಪನೆ ಅಗತ್ಯ: ಜೈಶಂಕರ್

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 10:22 IST
Last Updated 27 ಅಕ್ಟೋಬರ್ 2024, 10:22 IST
<div class="paragraphs"><p>ಎಸ್. ಜೈಶಂಕರ್ </p></div>

ಎಸ್. ಜೈಶಂಕರ್

   

ಪಿಟಿಐ ಚಿತ್ರ

ಮುಂಬೈ: ‘ವಿಕಸಿತ ಭಾರತ’ ಗುರಿ ಸಾಧಿಸಲು ‘ವಿಕಸಿತ ಮಹಾರಾಷ್ಟ್ರ’ದ ಪರಿಕಲ್ಪನೆಯು ಅಗತ್ಯವಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾನುವಾರ ತಿಳಿಸಿದ್ದಾರೆ,

ADVERTISEMENT

ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆ ಪತ್ರಿಕಾಗೋಷ್ಠಿ ಉದ್ದೇಶಿಸಿ ನಗರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರವು ತಂತ್ರಜ್ಞಾನ ಮತ್ತು ಮೂಲಸೌಕರ್ಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಹೀಗಾಗಿ ವಿಕಸಿತ ಭಾರತ ಗುರಿ ಸಾಧಿಸಲು ಮಹಾರಾಷ್ಟ್ರದ ಅಭಿವೃದ್ದಿಯೂ ಪ್ರಮುಖ ಪಾತ್ರವಹಿಸಲಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಇರುವುದು ಅಗತ್ಯ. ಈ ಮೂಲಕ ವಿಕಸಿತ ಮಹಾರಾಷ್ಟ್ರ ಪರಿಕಲ್ಪನೆ ಸಾಕಾರಗೊಳ್ಳಲಿದೆ ಎಂದೂ ಜೈಶಂಕರ್‌ ತಿಳಿಸಿದ್ದಾರೆ.

ಭಾರತವು ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುತ್ತಿದ್ದು, ಶೂನ್ಯ ಸಹಿಷ್ಣುತೆ ಹೊಂದಿದೆ. ಎನ್‌ಡಿಎ ಮೈತ್ರಿಕೂಟ ಮೂರನೇ ಅವಧಿಯಲ್ಲಿ ಆರ್ಥಿಕತೆ ಹಾಗೂ ಉದ್ಯೋಗ ಸೃಷ್ಟಿ ಕಡೆಗೆ ಹೆಚ್ಚಿನ ಗಮನಹರಿಸಲಿದೆ ಎಂದೂ ಜೈಶಂಕರ್‌ ಹೇಳಿದ್ದಾರೆ,

288 ಸದಸ್ಯ ಬಲದ 'ಮಹಾ' ವಿಧಾನಸಭೆಗೆ ನವೆಂಬರ್‌ 20ರಂದು ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. 23ರಂದು ಫಲಿತಾಂಶ ಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.