ADVERTISEMENT

ಅರುಣಾಚಲಪ್ರದೇಶ |ಮುಖ್ಯಮಂತ್ರಿಯಾಗಿ ಪೇಮಾ ಖಂಡು ಪುನರಾಯ್ಕೆ

ಪಿಟಿಐ
Published 12 ಜೂನ್ 2024, 14:04 IST
Last Updated 12 ಜೂನ್ 2024, 14:04 IST
<div class="paragraphs"><p>ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪೆಮಾ ಖಂಡು ಅವರು ಆಯ್ಕೆಯಾಗಿದ್ದಾರೆ.</p></div>

ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪೆಮಾ ಖಂಡು ಅವರು ಆಯ್ಕೆಯಾಗಿದ್ದಾರೆ.

   

–ಎಕ್ಸ್‌ (ಟ್ವಿಟರ್ ಚಿತ್ರ)

ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೇಮಾ ಖಂಡು ಅವರು ಪುನರಾಯ್ಕೆಯಾಗಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡ ತರುಣ್ ಛುಗ್ ಹೇಳಿದರು.

ADVERTISEMENT

ಬುಧವಾರ ಇಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಅವರು ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. 

ಛುಗ್ ಮತ್ತು ರವಿಶಂಕರ್ ಪ್ರಸಾದ್ ಅವರು ಕೇಂದ್ರದಿಂದ ಪಕ್ಷದ ವೀಕ್ಷಕರಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಈಶಾನ್ಯ ರಾಜ್ಯದವರೇ ಆಗಿರುವ ಕೇಂದ್ರ ಸಚಿವ ಕಿರಣ್ ರಿಜಿಜು ಅವರೂ ಕೂಡ ಹಾಜರಿದ್ದರು.

ನಂತರ ಸಂಜೆ ಪೇಮಾ ಖಂಡು ಅವರು ಛುಗ್ ಮತ್ತು ಇತರ ಕೆಲವು ಶಾಸಕರೊಂದಿಗೆ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಕೆ.ಟಿ.ಪರ್ನಾಯಕ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ರಾಜ್ಯಪಾಲರು ಪೇಮಾ ಖಂಡು ಅವರಿಗೆ ಪ್ರಮಾಣ ವಚನ ಸ್ವೀಕರಿಸುವಂತೆ ಆಹ್ವಾನಿಸಿದರು.

ಬಿಜೆಪಿ ಸತತ ಮೂರನೇ ಬಾರಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, 60 ಸ್ಥಾನಗಳ ಪೈಕಿ 46 ಸ್ಥಾನಗಳನ್ನು ಗೆದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.