ಕಾನ್ಪುರ: ಪೊಲೀಸ್ ಎನ್‌ಕೌಂಟರ್‌ನಲ್ಲಿ ಕುಖ್ಯಾತ ರೌಡಿ ವಿಕಾಸ್ ದುಬೆ ಮೃತಪಟ್ಟಿರುವುದಕ್ಕೆ, ಅವನ ಹುಟ್ಟೂರಾದಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಗಿದೆ.
ಸುಮಾರು ಮೂವತ್ತು ವರ್ಷಗಳಿಂದ ಆತಂಕ ಸೃಷ್ಟಿಸಿದ್ದ ವಿಕಾಸ್ ದುಬೆ ಸಾವಿಗೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಿಹಿ ಹಂಚಿ ಸಂಭ್ರಮಿಸಿರುವ ಬಿಕ್ರು ಗ್ರಾಮಸ್ಥರು ಭಯದ ಯುಗವೊಂದು ಅಂತ್ಯವಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವಾರ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮಕ್ಕೆ ದುಬೆಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಈತ ಮತ್ತು ಈತನ ಸಹಚರರು ಗುಂಡಿನ ದಾಳಿ ನಡೆಸಿದ್ದರು. ಈ ದುರ್ಘಟನೆಯಲ್ಲಿ ಡಿವೈಎಸ್‌ಪಿ ಸೇರಿದಂತೆ ಎಂಟು ಪೊಲೀಸರು ಹತ್ಯೆಯಾಗಿದ್ದರು. ದುಬೆನನ್ನು ಬಂಧಿಸಲು ಮಾಹಿತಿ ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಈತನ ಬೆನ್ನು ಬಿದ್ದಿದ್ದ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ವಿಕಾಸ್ ದುಬೆಯನ್ನು ಎನ್‌ಕೌಂಟರ್ ಮೂಲಕ ಹತ್ಯೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.