ಮುಂಬೈ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಪ್ರಬಲ ಅಭ್ಯರ್ಥಿಯನ್ನು ಇಳಿಸಲಾಗದ ಪ್ರತಿಪಕ್ಷಗಳು ಸಮರ್ಥ ಪ್ರಧಾನಿಯನ್ನು ಕೊಡಲು ಹೇಗೆ ಸಾಧ್ಯವೆಂದು ಜನರು ಪ್ರಶ್ನಿಸಬಹುದು ಎಂದು ಶಿವಸೇನಾ ಹೇಳಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ರಾಷ್ಟ್ರಪತಿ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಒತ್ತಿ ಹೇಳಿದೆ.
ಮಹಾತ್ಮ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೆಸರುಗಳು ನಿಯಮಿತವಾಗಿ ಕೇಳಿಬರುತ್ತಿವೆ. ಆದರೆ ಇವರಿಗೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡುವಷ್ಟು ವರ್ಚಸ್ಸನ್ನು ಹೊಂದಿಲ್ಲ ಎಂದು ಶಿವಸೇನಾ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಆರಂಭದಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಆದರೆ ಶರದ್ ಅವರು ಸ್ಪರ್ಧಿಸಲು ನಿರಾಕರಿಸಿದ ಬಳಿಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೋಪಾಲಕೃಷ್ಣ ಮತ್ತು ಫಾರೂಕ್ ಅಬ್ದುಲ್ಲಾ ಅವರ ಹೆಸರನ್ನು ಪ್ರಸ್ತಾಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.