ADVERTISEMENT

ಕೇಜ್ರಿವಾಲ್‌ಗೆ ಸಿಎಂ ಆಗಿ ಮುಂದುವರಿಯಲು ನೈತಿಕ ಹಕ್ಕಿಲ್ಲ: ಬಿಜೆಪಿ

ಪಿಟಿಐ
Published 2 ಏಪ್ರಿಲ್ 2024, 10:13 IST
Last Updated 2 ಏಪ್ರಿಲ್ 2024, 10:13 IST
<div class="paragraphs"><p>ಅರವಿಂದ ಕೇಜ್ರಿವಾಲ್‌</p></div>

ಅರವಿಂದ ಕೇಜ್ರಿವಾಲ್‌

   

ನವದೆಹಲಿ: ದೆಹಲಿಯ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅರವಿಂದ ಕೇಜ್ರಿವಾಲ್ ಅವರಿಗೆ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ದೂರಿದೆ.

ಪ್ರಾಮಾಣಿಕ ಹಾಗೂ ಪಾರದರ್ಶಕ ಸರ್ಕಾರವನ್ನು ನಡೆಸಬಲ್ಲ ಇದಕ್ಕೂ ಉತ್ತಮವಾದ ಸಿಎಂ ಅನ್ನು ಹೊಂದಲು ರಾಷ್ಟ್ರ ರಾಜಧಾನಿಯ ಜನರು ಅರ್ಹರಾಗಿದ್ದಾರೆ ಎಂದು ಹೇಳಿದೆ.

ADVERTISEMENT

ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ಅರವಿಂದ ಕೇಜ್ರಿವಾಲ್ ಅವರ 'ದ್ವಂದ್ವ ನೀತಿ'ಯನ್ನು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪ್ರಶ್ನಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇನ್ನೊಬ್ಬ ಸಹೋದ್ಯೋಗಿ ಸತ್ಯೇಂದ್ರ ಜೈನ್ ಅವರಿಂದ ರಾಜೀನಾಮೆ ಪಡೆದಿರುವ ಕೇಜ್ರಿವಾಲ್, ಸ್ವತಃ ತಾವೇ ಬಂಧನಕ್ಕೊಳಗಾದ ಸಂದರ್ಭದಲ್ಲಿ ರಾಜೀನಾಮೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಏ. 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನು ಉಲ್ಲೇಖ ಮಾಡಿರುವ ಗೌರವ್ ಭಾಟಿಯಾ, ಜೈಲಿನಲ್ಲಿದ್ದುಕೊಂಡು ಸರ್ಕಾರ ನಡೆಸಲು ಹೇಗೆ ಸಾಧ್ಯ? ಕೇಜ್ರಿವಾಲ್ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.