ADVERTISEMENT

ಕೇಜ್ರಿವಾಲ್‌ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್‌

ಪಿಟಿಐ
Published 2 ಮೇ 2024, 10:15 IST
Last Updated 2 ಮೇ 2024, 10:15 IST
<div class="paragraphs"><p>ಅರವಿಂದ ಕೇಜ್ರಿವಾಲ್, ಸುನಿತಾ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್, ಸುನಿತಾ ಕೇಜ್ರಿವಾಲ್

   

ಅಹಮದಾಬಾದ್: ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿ ಜೈಲಿನ ಕಂಬಿಗಳ ಹಿಂದೆ ತಳ್ಳಿರುವ ಬಿಜೆಪಿಯ ನಡೆಗೆ ಜನರು ಚುನಾವಣೆಯಲ್ಲಿ ವೋಟ್‌ಗಳ ಮೂಲಕ ಉತ್ತರಿಸಲಿದ್ದಾರೆ ಎಂದು ಕೇಜ್ರಿವಾಲ್‌ ಪತ್ನಿ, ಸುನಿತಾ ಕೇಜ್ರಿವಾಲ್‌ ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ಕೇಜ್ರಿವಾಲ್‌ ಅವರನ್ನು ಬಂಧಿಸುವ ಮೂಲಕ ಅವರ ಧ್ವನಿಯು ಜನರಿಗೆ ತಲುಪುವುದಿಲ್ಲ ಎಂದುಕೊಂಡಿದ್ದೀರಾ?. ಆದರೆ ಜನರು ಬುದ್ಧಿವಂತರಾಗಿದ್ದಾರೆ. ನಿಮ್ಮ ಈ ನಡೆಗೆ ಜನರು ಮತದಾನದ ಮೂಲಕವೇ ಉತ್ತರಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಎಎಪಿ ಮುಖಂಡ ಸಂದೀಪ್ ಪಾಠಕ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಮಾತ್ರವೇ ಮುಸ್ಲಿಂ ಮೀಸಲಾತಿ ಸಂಬಂಧ ಮಾತನಾಡುತ್ತಾರೆ. ಆದರೆ ನೀವು (ಮೋದಿ) ಏಕೆ ಜನರ ಮುಂದೆ ನಿಮ್ಮ ಅಭಿವೃದ್ಧಿಯ ಕಾರ್ಯಗಳನ್ನು ಮುಂದಿಟ್ಟು ಮತ ಕೇಳುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.

ಜನರು ಪ್ರಬುದ್ಧರಾಗಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಜನರು ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರ ಸೇರಿದಂತೆ ಉತ್ತಮ ಜೀವನ ನಡೆಸಲು ಸಹಾಯವಾಗುವ ಅಂಶಗಳನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಪಾಠಕ್‌ ಹೇಳಿದ್ದಾರೆ.

ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎಎಪಿಯೂ ರಾಜ್ಯದ 26 ಕ್ಷೇತ್ರಗಳ ಪೈಕಿ ಎರಡರಲ್ಲಿ ಸ್ಪರ್ಧಿಸುತ್ತಿದೆ. ಜನರು ಎಎಪಿಯನ್ನು ಬೆಂಬಲಿಸುತ್ತಾರೆ. ಗುಜರಾತಿನ ಲೋಕಸಭಾ ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸ ಹೊಂದಿರುವ ಬಿಜೆಪಿಗೆ ಹೊಡೆತ ಬೀಳಲಿದೆ ಎಂದು ಪಾಠಕ್‌ ತಿಳಿಸಿದ್ದಾರೆ.

ಮಾರ್ಚ್‌ 21ರಂದು ದೆಹಲಿ ಅಬಕಾರಿ ನೀತಿ ಸಂಬಂಧ ಇ.ಡಿ ಅಧಿಕಾರಿಗಳಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ತಿಹಾರ್‌ ಜೈಲಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.