ADVERTISEMENT

ಶಾಹೀನ್ ಬಾಗ್ ಪ್ರತಿಭಟನೆ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್‌‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2020, 13:15 IST
Last Updated 3 ಫೆಬ್ರುವರಿ 2020, 13:15 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಶಾಹೀನ್ ಬಾಗ್‌‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತೆರೆವುಗೊಳಿಸುವಂತೆ ಕೇಂದ್ರ ಹಾಗೂ ಇತರರಿಗೆ ನಿರ್ದೇಶನ ನೀಡುವಂತೆ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‌‌ಗೆ ಮನವಿ ಮಾಡಿದ್ದಾರೆ.

ಸೋಮವಾರ ಅರ್ಜಿ ಸಲ್ಲಿಸಿರುವ ನಂದಕಿಶೋರ್ ಗರ್ಗ್ ಎಂಬುವರು ಕಳೆದ ಒಂದೂವರೆ ತಿಂಗಳಿಂದ ದೆಹಲಿಯ ಶಾಹೀನ್ ಬಾಗ್, ಕಾಳಿಂಡಿ ಕುಂಜ್ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದರಿಂದಾಗಿ ದೆಹಲಿ ಹಾಗೂ ನೋಯ್ಡಾಗಳ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಇದರಿಂದಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವುದರಿಂದ ಜನರದಿನನಿತ್ಯದ ಕೆಲಸಗಳಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಸಮಗ್ರ ಮಾರ್ಗ ಸೂಚಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆಯೂ ಮನವಿಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.