ಚೆನ್ನೈ: ತಮಿಳುನಾಡಿನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಚೇರಿಗೆ ಬುಧವಾರ ತಡರಾತ್ರಿ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ.
ಘಟನೆ ಸಂಬಂಧ ಶಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.
ಪೊಲೀಸ್ ಮಾಹಿತಿ ಪ್ರಕಾರ, ರಾತ್ರಿ ಸುಮಾರು 1 ಗಂಟೆ ವೇಳೆಗೆ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ.
ವಿನೋದ್ ಎಂಬ ಹೆಸರಿನ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.