ನವದೆಹಲಿ: ಕೇಂದ್ರ ಸರ್ಕಾರವು ಹೇರಿದ್ದ ಐದು ವರ್ಷಗಳ ನಿಷೇಧವನ್ನು, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ನ್ಯಾಯಮಂಡಳಿಯು ಎತ್ತಿ ಹಿಡಿದಿರುವುದನ್ನು ಪ್ರಶ್ನಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠವು ಪಿಎಫ್‌ಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಿದೆ.
2022 ಸೆಪ್ಟೆಂಬರ್ 27ರಂದು ಸಂಘಟನೆಗೆ ನಿಷೇಧ ಹೇರಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು, ಯುಎಪಿಎ ನ್ಯಾಯಮಂಡಳಿಯು ಎತ್ತಿ ಹಿಡಿದಿತ್ತು.
ಐಎಸ್ ಭಯೋತ್ಪಾದಕ ಸಂಘಟನೆಯ ಜೊತೆ ನಂಟು ಹೊಂದಿರುವ ಮತ್ತು ಕೋಮುದ್ವೇಷ ಹರಡಲು ಯತ್ನಿಸಿರುವ ಆರೋಪದಲ್ಲಿ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮೇಲೆ ನಿಷೇಧ ಹೇರಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.