ADVERTISEMENT

ವಕ್ಫ್‌ ಕಾಯ್ದೆ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

ಪಿಟಿಐ
Published 16 ಏಪ್ರಿಲ್ 2022, 15:36 IST
Last Updated 16 ಏಪ್ರಿಲ್ 2022, 15:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವಕ್ಫ್ ಆಸ್ತಿಗಳಿಗೆ ವಿಶೇಷ ಸ್ಥಾನಮಾನ ನೀಡುವ ವಕ್ಫ್ ಕಾಯ್ದೆಯ ಕೆಲವು ನಿಬಂಧನೆಗಳನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ. ಟ್ರಸ್ಟ್‌ಗಳಿಗೆ ಏಕರೂಪದ ಕಾನೂನು ಜಾರಿಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿದಾರರಾದ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು, ‘ಟ್ರಸ್ಟ್ ಮತ್ತು ಟ್ರಸ್ಟಿಗಳು, ದತ್ತಿಗಳು ಮತ್ತು ದತ್ತಿ ಸಂಸ್ಥೆಗಳು, ಧಾರ್ಮಿಕ ದತ್ತಿಗಳು ಮತ್ತು ಸಂಸ್ಥೆಗಳಿಗೆ ಏಕರೂಪದ ಕಾನೂನನ್ನು ಜಾರಿಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕು. ವಕ್ಫ್ ಆಸ್ತಿಗಳು ಯಾವುದೇ ವಿಶೇಷ ಹಕ್ಕುಗಳನ್ನು ಅನುಭವಿಸಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದರು.

ವಕ್ಫ್ ಕಾಯ್ದೆ– 1995 ರ ನಿಬಂಧನೆಗಳ ಸಿಂಧುತ್ವವನ್ನು ಪ್ರಶ್ನಿಸಿರುವ ಅರ್ಜಿದಾರರು, ಇಸ್ಲಾಮಿಕ್ ಹೊರತುಪಡಿಸಿದ ಧಾರ್ಮಿಕ ಸಂಸ್ಥೆಗಳ ಟ್ರಸ್ಟ್‌ಗಳು, ದತ್ತಿ ಮತ್ತು ಧಾರ್ಮಿಕ ಸಂಸ್ಥೆಗಳಿಗೆ ಯಾವುದೇ ವಿಶೇಷ ಹಕ್ಕುಗಳನ್ನು ನೀಡಲಾಗಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.