ವಾರಾಣಸಿ: ಇಲ್ಲಿನ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವು ತ್ವರಿತ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ.
ಈ ಅರ್ಜಿ ವಿಚಾರಣೆಯನ್ನು ತ್ವರಿತ ನ್ಯಾಯಾಲಯವು ಮೇ 30ರಂದು ನಡೆಸಲಿದೆ ಎಂದು ಸರ್ಕಾರದ ಪರ ವಕೀಲ ರಾಣಾ ಸಂಜೀವ್ ಸಿಂಗ್ ಅವರು ಬುಧವಾರ ಮಾಹಿತಿ ನೀಡಿದರು.
ವಿಶ್ವ ವೇದಿಕ್ ಸನಾತನ ಸಂಘದ ಪರವಾಗಿ ಸಂಘದ ಅಧ್ಯಕ್ಷ ಜಿತೇಂದ್ರ ಸಿಂಹ ಬಿಸೇನ ಅವರ ಪತ್ನಿ ಕಿರಣ್ ಸಿಂಗ್, ಸಂಘದ ಪ್ರಧಾನ ಕಾರ್ಯದರ್ಶಿ ಅವರು, ಈ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಶಿವಲಿಂಗ ಪತ್ತೆಯಾದ ಮಸೀದಿ ಆವರಣದೊಳಕ್ಕೆ ಮುಸ್ಲಿಮರ ಪ್ರವೇಶ ನಿರ್ಬಂಧಿಸಬೇಕು. ಜೊತೆಗೆ ಈ ಆವರಣವನ್ನು ತಮಗೆ ಬಿಟ್ಟುಕೊಟ್ಟು, ಶಿವಲಿಂಗಕ್ಕೆ ಪೂಜೆ-ಪುನಸ್ಕಾರ ಮತ್ತು ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.