ADVERTISEMENT

ಪರಿಶಿಷ್ಟರಿಗೆ ಮೀಸಲಾತಿ ವಿಸ್ತರಣೆ: ನ. 21ಕ್ಕೆ ಸುಪ್ರೀಂ ಕೋರ್ಟ್‌ ವಿಚಾರಣೆ

ಪಿಟಿಐ
Published 20 ಸೆಪ್ಟೆಂಬರ್ 2023, 13:43 IST
Last Updated 20 ಸೆಪ್ಟೆಂಬರ್ 2023, 13:43 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ವಿಸ್ತರಣೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನವೆಂಬರ್‌ 21ರಂದು ಕೈಗೆತ್ತಿಕೊಳ್ಳಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ಎಂ.ಎಂ. ಸುಂದರೇಶ್‌, ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು, ಸಂವಿಧಾನದ 104ನೇ ತಿದ್ದುಪಡಿ ಮೂಲಕ ಮತ್ತೆ ಹತ್ತು ವರ್ಷಗಳ ಕಾಲ ಈ ಸಮುದಾಯಗಳಿಗೆ ಮೀಸಲಾತಿ ಸೌಲಭ್ಯ ವಿಸ್ತರಿಸಿರುವ ಬಗ್ಗೆ ಪರಾಮರ್ಶೆ ನಡೆಸಲಿದೆ.

ಈ ಸಮುದಾಯಗಳಿಗೆ ಹಿಂದೆ ಮೀಸಲಾತಿ ವಿಸ್ತರಣೆಗೆ ಸಂಬಂಧಿಸಿ ಸಂವಿಧಾನಕ್ಕೆ ತಂದಿರುವ ತಿದ್ದುಪಡಿಗಳಿಗೆ ಈ ವಿಚಾರಣೆಯು ಅನ್ವಯಿಸುವುದಿಲ್ಲ ಎಂದು ನ್ಯಾಯಪೀಠ ಸ್ವಷ್ಟಪಡಿಸಿದೆ.

ADVERTISEMENT

ಸಂವಿಧಾನದ ಮೂಲದಲ್ಲಿ ಪರಿಶಿಷ್ಟರಿಗೆ ಹತ್ತು ವರ್ಷಗಳಷ್ಟೇ ಮೀಸಲಾತಿ ನಿಗದಿಪಡಿಸಲಾಗಿದೆ. ಆದರೆ, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಸಂವಿಧಾನದ ತಿದ್ದುಪಡಿಗೆ ಒಪ್ಪಿಗೆ ನೀಡುವ ಮೂಲಕ ಮೀಸಲಾತಿಯನ್ನು ವಿಸ್ತರಿಸಲಾಗಿದೆ. 104ನೇ ತಿದ್ದುಪಡಿ ಮೂಲಕ ಮತ್ತೆ ಹತ್ತು ವರ್ಷಗಳವರೆಗೆ ಮೀಸಲಾತಿ ಸೌಲಭ್ಯವನ್ನು ಮುಂದುವರಿಸಲಾಗಿದೆ. ಜೊತೆಗೆ, ಆಂಗ್ಲೊ ಇಂಡಿಯನ್‌ ಪ್ರಾತಿನಿಧ್ಯವನ್ನು ರದ್ದುಪಡಿಸಲಾಗಿದೆ. ಈ ತಿದ್ದುಪಡಿಯ ಸಿಂಧುತ್ವವನ್ನು ಪರಾಮರ್ಶೆ ನಡೆಸಲಾಗುತ್ತದೆ ಎಂದು ಹೇಳಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.