ADVERTISEMENT

ದೇಶದ 11ನೇ ‘ವಂದೇ ಭಾರತ್‌’ ಎಕ್ಸ್‌ಪ್ರೆಸ್‌ ರೈಲಿಗೆ ಮೋದಿ ಚಾಲನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಏಪ್ರಿಲ್ 2023, 11:08 IST
Last Updated 1 ಏಪ್ರಿಲ್ 2023, 11:08 IST
ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು
ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು    

ಭೋಪಾಲ್‌: ದೇಶದ 11ನೇ ‘ವಂದೇ ಭಾರತ್’ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ರಾಣಿ ಕಮಲಾಪತಿ ನಿಲ್ದಾಣದಲ್ಲಿ ಶನಿವಾರ ಚಾಲನೆ ನೀಡಿದರು.

ರೈಲು ಮಧ್ಯಪ್ರದೇಶದ ಭೋಪಾಲ್‌ – ದೆಹಲಿ ನಡುವಿನ ಮಾರ್ಗದಲ್ಲಿ ಸಂಚರಿಸಲಿದೆ.

‘ಮಧ್ಯಪ್ರದೇಶ ಮತ್ತು ದೆಹಲಿ ಮಧ್ಯೆ ಈ ರೈಲು ಸಂಪರ್ಕವನ್ನು ಹೆಚ್ಚಿಸಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಸುಮಾರು ಏಳು ಗಂಟೆಗಳಲ್ಲಿ 708 ಕಿ.ಮೀ ದೂರವನ್ನು ಈ ರೈಲು ಕ್ರಮಿಸಲಿದೆ. ಈ ಮಾರ್ಗದಲ್ಲಿ ರೈಲು ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ರೈಲಿನಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

2019ರ ಫೆಬ್ರುವರಿ 15ರಂದು ದೇಶದ ಮೊದಲ ವಂದೇ ಭಾರತ್‌ ರೈಲಿಗೆ ಮೋದಿ ಚಾಲನೆ ನೀಡಿದ್ದರು. ದೆಹಲಿ ಮತ್ತು ವಾರಾಣಸಿ ನಡುವೆ ಮೊದಲ ರೈಲು ಸಂಚರಿಸಿತ್ತು.

ಪ್ರಾಣಿಗಳಿಗೆ ಡಿಕ್ಕಿ ಹೊಡದ ಘಟನೆಗಳು, ಕಲ್ಲು ತೂರಾಟದಂಥ ಪ್ರಕರಣಗಳ ಕಾರಣಗಳಿಗಾಗಿ ವಂದೇ ಭಾರತ್‌ ರೈಲು ಹಲವು ಬಾರಿ ಸುದ್ದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.