ನವದೆಹಲಿ: ಸೂರತ್ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ‘ಸೂರತ್ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸುವ ಕುರಿತು ಸಚಿವ ಸಂಪುಟ ನಿರ್ಧಾರವು ಸಂಪರ್ಕ ಮತ್ತು ವಾಣಿಜ್ಯ ಕ್ಷೇತ್ರವನ್ನು ಉತ್ತೇಜಿಸಲು ಸಹಕಾರಿಯಾಗಿದೆ' ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.