ನವದೆಹಲಿ: ಜನಧನ ಯೋಜನೆಯಡಿ ತೆರೆಯಲಾದ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಇದೊಂದು ಮಹತ್ವದ ಮೈಲಿಗಲ್ಲು ಎಂದು ಅವರು ಬಣ್ಣಿಸಿದ್ದಾರೆ.
ಇವುಗಳಲ್ಲಿ ಅರ್ಧಕ್ಕಿಂತ ಹೆಚ್ಚು ಖಾತೆಗಳು ಮಹಿಳೆಯರಿಗೆ ಸೇರಿರುವುದು ಖುಷಿ ತಂದಿದೆ ಎಂದು ಮೋದಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಜನಧನ ಯೋಜನೆಯಡಿ ತೆರೆಯಲಾದ ಖಾತೆಗಳ ಸಂಖ್ಯೆ 50 ಕೋಟಿ ದಾಟಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಶುಕ್ರವಾರ ಮಾಹಿತಿ ನೀಡಿತ್ತು. ಅಲ್ಲದೆ ಈ ಪೈಕಿ ಶೇ 56ರಷ್ಟು ಖಾತೆಗಳು ಮಹಿಳೆಯರಿಗೆ ಸೇರಿದ್ದಾಗಿವೆ ಎಂದು ಇಲಾಖೆ ಹೇಳಿತ್ತು.
ಶೇ 67ರಷ್ಟು ಖಾತೆಗಳು ಗ್ರಾಮೀಣ ಹಾಗೂ ಅರೆನಗರ ಪ್ರದೇಶದಲ್ಲಿ ತೆರೆಯಲಾಗಿದೆ. ಜನಧನ ಖಾತೆಗಳಲ್ಲಿ ₹2.03 ಲಕ್ಷ ಕೋಟಿ ಠೇವಣಿ ಇದ್ದು, ಒಟ್ಟು 34 ಕೋಟಿ ರೂಪೇ ಡೆಬಿಟ್ ಕಾರ್ಡ್‌ಗಳನ್ನು ವಿತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.