ನವದೆಹಲಿ: ಪ್ರತಿ ತಿಂಗಳು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನಿರ್ದಿಷ್ಟ ಮೊತ್ತವನ್ನು ಜಮಾ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಆರ್ಥಿಕ ಸಂಕಷ್ಟದಿಂದ ರೈತರನ್ನು ಪಾರು ಮಾಡಲು ರೂಪಿಸಲಾಗಿರುವ ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಸದ್ಯದಲ್ಲಿಯೇ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರೈತರಿಗೆ ಹೆಚ್ಚಿನ ವಿಮಾ ಮೊತ್ತ ನೀಡಲು ಬೆಳೆವಿಮೆ ಯೋಜನೆಯನ್ನು ಪರಿಷ್ಕರಿಸುವ ಬಗ್ಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.