ವಯನಾಡ್(ಕೇರಳ): ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಇಂದು(ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಚೂರಲ್‌ಮಲ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳಲ್ಲಿ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು.
ಸಮೀಕ್ಷೆ ವೇಳೆ ಪ್ರಧಾನಿ ಅವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಇದ್ದರು.
ವೈಮಾನಿಕ ಸಮೀಕ್ಷೆ ನಂತರ ಕಲ್ಪೆಟ್ಟಾದಲ್ಲಿರುವ ಎಸ್‌ಕೆಎಂಜೆ ಹೈಯರ್ ಸೆಕೆಂಡರಿ ಶಾಲೆ ಸಮೀಪ ಹೆಲಿಕಾಪ್ಟರ್ ಬಂದಿಳಿಯಲಿದ್ದು, ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಕೆಲವು ಭೂಕುಸಿತ ಪೀಡಿತ ಪ್ರದೇಶಗಳಿಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಭೂಕುಸಿತ ದುರಂತದಲ್ಲಿ 266ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.
ಕೇರಳಕ್ಕೆ ಆಗಮಿಸಿದ ಮೋದಿ
ಕಣ್ಣೂರು: ಭೂಕುಸಿತದಿಂದ ತತ್ತರಿಸಿರುವ ವಯನಾಡಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು(ಶನಿವಾರ) ಕೇರಳಕ್ಕೆ ಆಗಮಿಸಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ಅವರ ವಿಮಾನ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.