ADVERTISEMENT

ಭಾರತ-ಪಾಕ್ ಗಡಿಯಲ್ಲಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ

ಪಿಟಿಐ
Published 31 ಅಕ್ಟೋಬರ್ 2024, 10:32 IST
Last Updated 31 ಅಕ್ಟೋಬರ್ 2024, 10:32 IST
<div class="paragraphs"><p>ಭದ್ರತಾ ಪಡೆಯ ಯೋಧರಿಗೆ ಸಿಹಿ ತಿನ್ನಿಸುತ್ತಿರುವ ಪ್ರಧಾನಿ ಮೋದಿ</p></div>

ಭದ್ರತಾ ಪಡೆಯ ಯೋಧರಿಗೆ ಸಿಹಿ ತಿನ್ನಿಸುತ್ತಿರುವ ಪ್ರಧಾನಿ ಮೋದಿ

   

ಪಿಟಿಐ ಚಿತ್ರ

ಭುಜ್‌ (ಗುಜರಾತ್‌): ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಕಚ್ ಜಿಲ್ಲೆಯ ಭಾರತ-ಪಾಕ್ ಗಡಿಯಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಯೋಧರೊಂದಿಗೆ ಇಂದು (ಗುರುವಾರ) ದೀಪಾವಳಿ ಹಬ್ಬವನ್ನು ಆಚರಿಸಿದರು.

ADVERTISEMENT

ಪ್ರಧಾನಿ ಮೋದಿ ಅವರು ಸೈನಿಕರಿಗೆ ಸಿಹಿ ಹಂಚುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಿದರು ಎಂದು ಬಿಎಸ್‌ಎಫ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಿಎಸ್‌ಎಫ್‌ ಸಮವಸ್ತ್ರ ಧರಿಸಿ ಸೈನಿಕರಿಗೆ ಸಿಹಿ ತಿನ್ನಿಸುತ್ತಿರುವ ವಿಡಿಯೊವನ್ನು ಬಿಎಸ್‌ಎಫ್‌ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹಂಚಿಕೊಂಡಿದೆ.

ಇದಕ್ಕೂ ಮುನ್ನ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜನ್ಮದಿನದ ಅಂಗವಾಗಿ ಅವರು ಏಕತಾ ಪ್ರತಿಮೆಗೆ ಪುಷ್ಟ ನಮನ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.