ADVERTISEMENT

ಶ್ರೀಲಂಕಾದ ನೂತನ ಅಧ್ಯಕ್ಷ ದಿಸ್ಸನಾಯಕೆರನ್ನು ಅಭಿನಂದಿಸಿದ ಪ್ರಧಾನಿ ಮೋದಿ

ಪಿಟಿಐ
Published 23 ಸೆಪ್ಟೆಂಬರ್ 2024, 3:15 IST
Last Updated 23 ಸೆಪ್ಟೆಂಬರ್ 2024, 3:15 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ದ್ವೀಪ ರಾಷ್ಟ್ರ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಸಂಬಂಧ ಸಾಮಾಜಿ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯ ವೃದ್ಧಿಪಡಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ’ ಎಂದು ಹೇಳಿದ್ದಾರೆ.

ನೆರೆಯ ದೇಶ ಶ್ರೀಲಂಕಾವು ಭಾರತಕ್ಕೆ ವಿಶೇಷವಾದದ್ದು ಹಾಗೂ ಎರಡೂ ದೇಶಗಳ ನಡುವಿನ ವ್ಯಾಪಾರ– ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಜತೆಯಾಗಿ ಶ್ರಮಿಸೋಣ ಎಂದು ಮೋದಿ ತಿಳಿಸಿದ್ದಾರೆ.

ADVERTISEMENT

ಹೊಸ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ರಾಜಕಾರಣಿ ಅನುರಾ ಕುಮಾರ ದಿಸ್ಸನಾಯಕೆ ಅವರು ಇಂದು (ಸೋಮವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಆರ್ಥಿಕ ಬಿಕಟ್ಟಿನಿಂದ ಸುಧಾರಿಸಿಕೊಳ್ಳುತ್ತಿರುವ ದೇಶದಲ್ಲಿ ಹೊಸ ಅಧ್ಯಕ್ಷರ ಆಯ್ಕೆ ಸಂಬಂಧ ಶನಿವಾರ ಮತದಾನ ನಡೆದಿತ್ತು. 1.7 ಕೋಟಿ ಮತದಾರರ ಪೈಕಿ ಶೇ 75ರಷ್ಟು ಜನರು ಮತ ಚಲಾಯಿಸಿದ್ದರು.

ಮಾರ್ಕ್ಸಿಸ್ಟ್‌– ಲೆನಿನಿಸ್ಟ್‌ ಸಿದ್ಧಾಂತದ ಅಡಿಯಲ್ಲಿ ಸ್ಥಾಪನೆಗೊಂಡಿರುವ ಜನತಾ ವಿಮುಕ್ತಿ ಪೆರಮುನದ (ಪೀ‍ಪಲ್ಸ್‌ ಲಿಬರೇಷನ್‌ ಫ್ರಂಟ್‌) ನಾಯಕ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ನ್ಯಾಷನಲ್‌ ಪೀಪಲ್ಸ್‌ ಪವರ್‌ (ಎನ್‌ಪಿಪಿ) ಪಕ್ಷ ಚುನಾವಣಾ ಅಖಾಡಕ್ಕೆ ಇಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.