ನವದೆಹಲಿ: ನೇಪಾಳದ ಪ್ರಧಾನಿಯಾಗಿ ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ಕೆ.ಪಿ ಶರ್ಮ ಓಲಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
‘ಭಾರತ ಮತ್ತು ನೇಪಾಳದ ನಡುವಿನ ಸ್ನೇಹ ಸಂಬಂಧ ಮತ್ತಷ್ಟು ಬಲಪಡಿಸಲು ಮತ್ತು ಜನರ ಏಳಿಗೆಗಾಗಿ ಸಹಕಾರವನ್ನು ಇನ್ನಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ’ ಎಂದು ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಓಲಿ ಅವರು ನೇಪಾಳದ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಓಲಿ ಅವರೊಂದಿಗೆ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು, ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ– ಯುನಿಫೈಡ್ ಮಾರ್ಕ್ಸಿಸ್ಟ್ ಲೆನಿನಿಸ್ಟ್ (ಸಿಪಿಎನ್–ಯುಎಮ್‌ಎಲ್) ಮತ್ತು ನೇಪಾಳಿ ಕಾಂಗ್ರೆಸ್ (ಎನ್‌ಸಿ) ಪಕ್ಷಗಳ ಸಮ್ಮಿಶ್ರ ಸರ್ಕಾರದ ಪ್ರಧಾನಿಯಾಗಿ ಓಲಿ ಅವರನ್ನು ಭಾನುವಾರ ನೇಮಕ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.