ADVERTISEMENT

ರೋಜ್‌ಗಾರ್ ಮೇಳ: 50 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ

ಹೊಸದಾಗಿ ನೇಮಕಗೊಂಡ 50 ಸಾವಿರ ಮಂದಿ ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ನೇಮಕಾತಿ ಪತ್ರಗಳನ್ನು ವಿತರಿಸಿದರು.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಅಕ್ಟೋಬರ್ 2023, 10:11 IST
Last Updated 28 ಅಕ್ಟೋಬರ್ 2023, 10:11 IST
<div class="paragraphs"><p>ಪ್ರಧಾನಿ ಮೋದಿ</p></div>

ಪ್ರಧಾನಿ ಮೋದಿ

   

–ಚಿತ್ರ ಕೃಪೆ ಪಿಟಿಐ

ನವದೆಹಲಿ: ರೋಜ್‌ಗಾರ್‌ ಮೇಳದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ವಿಡಿಯೊ ಕಾನ್ಫರೆನ್ಸ್‌ ಮೂಲಕ ಹೊಸದಾಗಿ ಸೇರಿದ 50 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.

ADVERTISEMENT

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, 'ಕಳೆದ ವರ್ಷ ಅಕ್ಟೋಬರ್‌ನಲ್ಲಿ ರೋಜ್‌ಗಾರ್ ಮೇಳವನ್ನು ಪ್ರಾರಂಭಿಸಲಾಗಿದೆ. ಈವರೆಗೆ ಲಕ್ಷಾಂತರ ಯುವಕರಿಗೆ ಸರ್ಕಾರಿ ಉದ್ಯೋಗಕ್ಕಾಗಿ ನೇಮಕಾತಿ ಪತ್ರ ನೀಡಲಾಗಿದೆ. ಇಂದು 50 ಸಾವಿರಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೀಡಲಾಗಿದೆ. ದೀಪಾವಳಿಗೆ ಇನ್ನು ಸಮಯವಿದೆ. ಆದರೆ, ನೇಮಕಾತಿ ಪತ್ರ ಸ್ವೀಕರಿಸುವವರ ಕುಟುಂಬಗಳಿಗೆ ದೀಪಾವಳಿಗಿಂತ ಮೊದಲೇ ಹಬ್ಬದ ಸಂಭ್ರಮ ಮನೆ ಮಾಡುವಂತೆ ಮಾಡಿದೆ' ಎಂದು ಹೇಳಿದರು.

ದೇಶಾದ್ಯಂತ 37 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು, ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿ ನಡೆಯುತ್ತಿವೆ.

ದೇಶದಾದ್ಯಂತ ಆಯ್ಕೆಯಾದ ಹೊಸ ಅಭ್ಯರ್ಥಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೈಲ್ವೆ ಸಚಿವಾಲಯ, ಅಂಚೆ ಇಲಾಖೆ, ಕಂದಾಯ ಇಲಾಖೆ, ಗೃಹ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳಲ್ಲಿ ಸರ್ಕಾರದ ಸೇವೆಗೆ ಸೇರಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.