ನವದೆಹಲಿ: ಮೇಘಾಲಯ, ಮಣಿಪುರ ಹಾಗೂ ತ್ರಿಪುರಾ ‘ರಾಜ್ಯ ಸ್ಥಾಪನಾ ದಿನ’ದ ಅಂಗವಾಗಿ ಮೂರು ರಾಜ್ಯಗಳ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.
ಈಶಾನ್ಯ ಪ್ರದೇಶ ಕಾಯ್ದೆ–1971ರ ಅಡಿಯಲ್ಲಿ ಈ ಮೂರೂ ರಾಜ್ಯಗಳು 1972ರ ಜನವರಿ 21 ರಂದು ರಚನೆಯಾಗಿದ್ದವು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಮಣಿಪುರದ ರಾಜ್ಯ ಸ್ಥಾಪನೆಯ ಈ ದಿನದಂದು, ರಾಜ್ಯದ ಜನರಿಗೆ ನನ್ನ ಶುಭಾಶಯಗಳು. ಭಾರತದ ಪ್ರಗತಿಗೆ ಮಣಿಪುರ ಬಲವಾದ ಕೊಡುಗೆ ನೀಡಿದೆ. ಈ ರಾಜ್ಯದ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ. ಮಣಿಪುರದ ನಿರಂತರ ಅಭಿವೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ" ಎಂದು ಅವರು ಹೇಳಿದ್ದಾರೆ.
ತ್ರಿಪುರಾದ ಜನರಿಗೆ ಶುಭಾಶಯಗಳು, ಈ ನಾಡಿನ ಜನರಿಗೆ ಸಮೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತೇನೆ ಎಂದು ಮೋದಿ ಅವರು ಹೇಳಿದರು.
ಮತ್ತೊಂದು ಪೋಸ್ಟ್‌ನಲ್ಲಿ ಮೇಘಾಲಯದ ಜನರಿಗೆ ರಾಜ್ಯ ಸ್ಥಾಪನಾ ದಿನದ ಶುಭಾಶಯಗಳು! ಈ ನಾಡಿನ ಜನರ ಸಾಧನೆಗಳು ದೇಶದ ಪ್ರಗತಿಗೆ ಪ್ರಮುಖ ಕೊಡುಗೆಗಳಾಗಿವೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.