ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಾವು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ 9 ವರ್ಷಗಳಲ್ಲಿ ಒಂದೂ ರಜೆ ತೆಗೆದುಕೊಂಡಿಲ್ಲ ಎಂದು ತಿಳಿದು ಬಂದಿದೆ.
ನರೇಂದ್ರ ಮೋದಿ ಅವರು 2014 ರಲ್ಲಿ ಪ್ರಧಾನಿ ಗಾದಿಗೆ ಏರಿದ್ದರು. ಒಂದೂ ರಜೆ ಇಲ್ಲದೇ ಪ್ರಧಾನಿಯವರು ಕೆಲಸ ಮಾಡಿದ್ದಾರೆಂದು ಪಿಎಂಒ ಹೇಳಿದೆ.
ಪ್ರಧಾನ ಮಂತ್ರಿ ಕಚೇರಿಗೆ ಪ್ರಫುಲ್ ಎಸ್. ಸರ್ದಾ ಎನ್ನುವರು ಮಾಹಿತಿ ಹಕ್ಕು ಅಧಿನಿಯಮದಡಿ (ಆರ್‌ಟಿಐ) ಮಾಹಿತಿ ಕೋರಿದ್ದರು.
ಅಲ್ಲದೇ ಪ್ರಧಾನಿಯವರು ತಾವು ಅಧಿಕಾರ ವಹಿಸಿಕೊಂಡ ನಂತರ ದೇಶ ವಿದೇಶಗಳಲ್ಲಿ 3000 ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಜುಲೈ 31, 2023 ರಂದು ಸರ್ದಾ ಅವರು ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಅವರು ಈ0 ಎರಡು ಮಾಹಿತಿಗಳನ್ನು ಕೇಳಿ ಅರ್ಜಿ ಸಲ್ಲಿಸಿದ್ದರು.
ಈ ಆರ್‌ಟಿಐ ಅರ್ಜಿಯ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪ್ರಧಾನಿ ಮೋದಿ ಅವರು ರಜೆ ತೆಗೆದುಕೊಳ್ಳದೇ ಕೆಲಸ ಮಾಡುತ್ತಾರೆ ಎಂಬುದನ್ನು ಪ್ರಶಂಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.