ADVERTISEMENT

ಕೋವಿಡ್‌ ಸ್ಥಿತಿಗತಿ ಕುರಿತು ಪ್ರಧಾನಿ ಸಭೆ: ಮೋದಿ ಸಲಹೆ, ಸೂಚನೆಗಳೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜನವರಿ 2022, 15:04 IST
Last Updated 9 ಜನವರಿ 2022, 15:04 IST
ನರೇಂದ್ರ ಮೋದಿ
ನರೇಂದ್ರ ಮೋದಿ    

ನವದೆಹಲಿ: ದೇಶದ ವಿವಿಧ ರಾಜ್ಯಗಳ ಕೋವಿಡ್‌ ಸ್ಥಿತಿಗತಿಯ ಅವಲೋಕನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವಿಡಿಯೊ ಕಾನ್ಫರೆನ್ಸ್ ಉನ್ನತ ಮಟ್ಟದ ಸಭೆ ನಡೆಸಿದರು.

ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳಬೇಕಾದ ಅಗತ್ಯವನ್ನು ಪ್ರಧಾನಿ ಮೋದಿ ಸಭೆಯಲ್ಲಿ ಒತ್ತಿ ಹೇಳಿದರು. ಈ ಬಗ್ಗೆ ರಾಜ್ಯಗಳೊಂದಿಗೆ ಸಮನ್ವಯವನ್ನು ಕಾಪಾಡಿಕೊಳ್ಳಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

15–18ರ ವಯಸ್ಸಿನವರ ಲಸಿಕೀಕರಣದ ವೇಗವನ್ನು ಹೆಚ್ಚಿಸುವಂತೆ ಮೋದಿ ಸಭೆಯಲ್ಲಿ ಒತ್ತಾಯಿಸಿದರು. ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ಕಠಿಣ ನಿರ್ಬಂಧ ಮತ್ತು ಕಣ್ಗಾವಲು ವ್ಯವಸ್ಥೆ ಮುಂದುವರಿಸಬೇಕು ಎಂದು ಪ್ರಧಾನಿ ಹೇಳಿದರು. ಜತೆಗೆ, ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿರುವ ರಾಜ್ಯಗಳಿಗೆ ಅಗತ್ಯವಾದ ತಾಂತ್ರಿಕ ಬೆಂಬಲವನ್ನು ಒದಗಿಸುವುದಾಗಿ ಪ್ರಧಾನಮಂತ್ರಿ ತಿಳಿಸಿದರು. ಇದಕ್ಕಾಗಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ರಾಜ್ಯಗಳ ಕೋವಿಡ್‌ ಸ್ಥಿತಿಗತಿ, ಸಾರ್ವಜನಿಕ ಆರೋಗ್ಯಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಲು ಶೀಘ್ರದಲ್ಲೆ ಸಿಎಂಗಳೊಂದಿಗೆ ಸಭೆ ಕರೆಯಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು.

ಸದ್ಯ ಕೋವಿಡ್ ನಿಯಂತ್ರಿಸುವ ಕಾರ್ಯದಲ್ಲಿ ಕೋವಿಡ್‌ ಅಲ್ಲದ ಆರೋಗ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿಯೂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.