ADVERTISEMENT

ಅಮಿತ್ ಶಾ ಪ್ರಧಾನಿಯಾಗಲು ಮೋದಿ ಮತಯಾಚನೆ: ಅರವಿಂದ ಕೇಜ್ರಿವಾಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮೇ 2024, 9:47 IST
Last Updated 11 ಮೇ 2024, 9:47 IST
   

ನವದೆಹಲಿ: ‘ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಬಿಜೆಪಿ ನಾಯಕರು ಕೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬುತ್ತಿದ್ದು, ಎನ್‌ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಮೊದಲು ಬಿಜೆಪಿ ಘೋಷಿಸಲಿ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸವಾಲು ಹಾಕಿದರು.

ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್‌, ‘ಈ ವರ್ಷ ಸೆಪ್ಟೆಂಬರ್ 17ಕ್ಕೆ ಮೋದಿ ಅವರಿಗೆ 75 ವರ್ಷ ತುಂಬುತ್ತದೆ. 75 ವರ್ಷದ ನಂತರ ಪಕ್ಷದ ನಾಯಕರು ನಿವೃತ್ತರಾಗಬೇಕು ಎಂದು ಸ್ವತಃ ಮೋದಿಯವರೆ ನಿಯಮ ರೂಪಿಸಿದ್ದಾರೆ. ಅದರಂತೆ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಸುಮಿತ್ರಾ ಮಹಾಜನ್, ಯಶವಂತ್ ಸಿನ್ಹಾ ಅವರನ್ನು ನಿವೃತ್ತಿಗೊಳಿಸಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರ ಸರದಿ. ಹಾಗಾದರೆ ಎನ್‌ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು?’ ಎಂದು ಕೇಳಿದರು.

‘ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೊದಲು ಮುಖ್ಯಮಂತ್ರಿ ಸ್ಥಾನದಿಂದ ಯೋಗಿ ಆದಿತ್ಯನಾಥ ಅವರನ್ನು ಕಿತ್ತೊಗೆದು ನಂತರ ಅಮಿತ್ ಶಾ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತಾರೆ. ಪ್ರಧಾನಿ ಮೋದಿಯವರು ಅಮಿತ್ ಶಾ ಪರ ಮತ ಕೇಳುತ್ತಿದ್ದಾರೆ. ಮೋದಿಯವರ ಭರವಸೆಯನ್ನು ಅಮಿತ್ ಶಾ ಈಡೇರಿಸುತ್ತಾರಾ?’ ಎಂದು ಕೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.