ADVERTISEMENT

ಒಡಿಶಾ: ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಸುಭದ್ರಾ ಯೋಜನೆಗೆ PM ಮೋದಿ ಚಾಲನೆ

ಪಿಟಿಐ
Published 17 ಸೆಪ್ಟೆಂಬರ್ 2024, 7:30 IST
Last Updated 17 ಸೆಪ್ಟೆಂಬರ್ 2024, 7:30 IST
<div class="paragraphs"><p>‘ಸುಭದ್ರಾ’ ಯೋಜನೆಗೆ ಪ್ರಧಾನಿ ಮೋದಿ&nbsp;ಚಾಲನೆ</p></div>

‘ಸುಭದ್ರಾ’ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

   

ಭುವನೇಶ್ವರ: ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಒಡಿಶಾ ಸರ್ಕಾರದ ‘ಸುಭದ್ರಾ’ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಿದರು. 

ಈ ಯೋಜನೆಯ ಸೌಲಭ್ಯ ಒಡಿಶಾದ ಸುಮಾರು 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ದೊರಕಲಿದೆ. ಈ ಯೊಜನೆಯಡಿ 21–60 ವರ್ಷ ಮಹಿಳೆಯರು ಐದು ವರ್ಷಗಳಲ್ಲಿ ₹ 50 ಸಾವಿರ ಪಡೆಯಲಿದ್ದಾರೆ. ಅಂದರೆ ಪ್ರತಿ ವರ್ಷ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಎರಡು ಕಂತುಗಳಲ್ಲಿ ₹10 ಸಾವಿರ ಜಮಾ ಆಗಲಿದೆ.

ADVERTISEMENT

ಇದೇ ವೇಳೆ ಮೋದಿ ₹2800 ಕೋಟಿಗೂ ಅಧಿಕ ವೆಚ್ಚದ ರೈಲ್ವೆ ಯೋಜನೆಗೆ ಹಾಗೂ ₹1 ಸಾವಿರ ಕೋಟಿಗೂ ಅಧಿಕ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.

ಅಲ್ಲದೆ 14 ರಾಜ್ಯಗಳ 10 ಲಕ್ಷ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್‌ ಯೋಜನೆಯ ಫಲಾನುಭವಿಗಳಿಗೆ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದರು,  ಈ ಯೊಜನೆ ಇನ್ನೂ ಹೆಚ್ಚಿನ ಕುಟುಂಬಗಳಿಗೆ ಪ್ರಯೋಜನಕಾರಿಯಾಗುವಂತೆ ಸರ್ವೆ ನಡೆಸಲು ‘ಆವಾಸ್‌ + 2024’ ಮೊಬೈಲ್‌ ಅಪ್ಲಿಕೇಶನ್‌ ಅನ್ನು ಅನಾವರಣಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.