ADVERTISEMENT

ತಮಿಳುನಾಡು: ₹20 ಸಾವಿರ ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಪಿಟಿಐ
Published 2 ಜನವರಿ 2024, 10:06 IST
Last Updated 2 ಜನವರಿ 2024, 10:06 IST
<div class="paragraphs"><p>ತಿರುಚಿರಾಪಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ</p></div>

ತಿರುಚಿರಾಪಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ ಚಿತ್ರ

ತಿರುಚಿರಾಪಳ್ಳಿ: ತಮಿಳುನಾಡಿಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ₹20,140 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು.

ADVERTISEMENT

ವಾಯು ಮತ್ತು ಬಂದರು, ರೈಲು, ಹೆದ್ದಾರಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಪರಮಾಣು ಶಕ್ತಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರ ಸೇರಿದಂತೆ ಒಟ್ಟು 20 ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಇದೇ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, 2023ರ ಡಿಸೆಂಬರ್‌ನಲ್ಲಿ ಮಳೆಯಿಂದಾಗಿ ತಮಿಳುನಾಡಿನಾದ್ಯಂತ ಉಂಟಾದ ಪ್ರವಾಹ ಸ್ಥಿತಿಯ ಬಗ್ಗೆ ಉಲ್ಲೇಖಿಸಿದರು. ಮಳೆಯಿಂದಾಗಿ ನಷ್ಟ ಅನುಭವಿಸಿದ ಕುಟುಂಬಗಳ ಪರವಾಗಿ ಕೇಂದ್ರ ಸರ್ಕಾರ ನಿಲ್ಲಲಿದೆ. ರಾಜ್ಯ ಸರ್ಕಾರಕ್ಕೆ ಸಾಧ್ಯವಾದಷ್ಟು ನೆರವನ್ನು ಒದಗಿಸಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.