ADVERTISEMENT

ವಿದೇಶಕ್ಕೆ ತೆರಳುವ ಮೋದಿಗೆ ಮಣಿಪರಕ್ಕೆ ಭೇಟಿ ನೀಡಲು ಸಮಯವೇ ಇಲ್ಲ; ಜೈರಾಮ್ ರಮೇಶ್

ಪಿಟಿಐ
Published 14 ಸೆಪ್ಟೆಂಬರ್ 2024, 7:50 IST
Last Updated 14 ಸೆಪ್ಟೆಂಬರ್ 2024, 7:50 IST
<div class="paragraphs"><p>ಜೈರಾಮ್ ರಮೇಶ್ ಮತ್ತು ನರೇಂದ್ರ ಮೋದಿ</p></div>

ಜೈರಾಮ್ ರಮೇಶ್ ಮತ್ತು ನರೇಂದ್ರ ಮೋದಿ

   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಗಳಿಗೆ ಹಾಗೂ ದೇಶದ ಇತರ ಭಾಗಗಳಿಗೆ ಪ್ರವಾಸ ಬೆಳಸಲು ಸಾಧ್ಯವಾಗುತ್ತದೆ. ಆದರೆ ಸಂಘರ್ಷ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಅವರಿಗೆ ಸಮಯವೇ ಇಲ್ಲ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಸಂಘರ್ಷ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಅವರ ಸಂಕಷ್ಟಗಳನ್ನು ಆಲಿಸಲು ಪ್ರಧಾನಿಗೆ ಈವರೆಗೂ ಸಮಯ ಸಿಕ್ಕಿಲ್ಲವೇ?, ಕಳೆದ ವರ್ಷದಿಂದ ಇಲ್ಲಿಯವರೆಗೂ ಭೇಟಿ ನೀಡಲು ಏಕೆ ಸಾಧ್ಯವಾಗಲಿಲ್ಲ. ಶಾಂತಿಯನ್ನು ಮರುಸ್ಥಾಪಿಸುಲು ಯಾಕೆ ಪ್ರಯತ್ನಿಸುತ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ.

ADVERTISEMENT

‘ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಹಿಂಸಾಚಾರದಲ್ಲಿ 220 ಮಂದಿ ಮೃತಪಟ ಹಾಗೂ ಘರ್ಷಣೆ ಸಂಬಂಧಿಸಿದಂತೆ ಮೂವರು ಸದಸ್ಯರ ತನಿಖಾ ಆಯೋಗವನ್ನು ಕೇಂದ್ರ ಸರ್ಕಾರ ರಚಿಸಿದೆ. ಆದರೆ ಈವರೆಗೂ ತನಿಖೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ’ ಎಂದು ರಮೇಶ್‌ ಹೇಳಿದ್ದಾರೆ.

ಕೇಂದ್ರ ಸರ್ಕಾರ ಆಯೋಗಕ್ಕೆ ವರದಿ ಸಲ್ಲಿಸಲು 2024ರ ನವೆಂಬರ್ 24ರವರೆಗೂ ಕಾಲಾವಕಾಶ ನೀಡಿದೆ ಎಂದು ತಿಳಿದು ಬಂದಿದೆ.

ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆದ ಜನಾಂಗೀಯ ಘರ್ಷಣೆಯಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.