ಗುವಾಹಟಿ: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಶುಕ್ರವಾರ ಮಧ್ಯಾಹ್ನ ಅಸ್ಸಾಂನ ತೇಜ್‌ಪುರಕ್ಕೆ ಆಗಮಿಸಲಿದ್ದಾರೆ.
ಶನಿವಾರ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ₹ 18 ಸಾವಿರ ಕೋಟಿ ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಸಂಜೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸಲಿದ್ದು ರಾತ್ರಿ ಅಲ್ಲಿಯೇ ತಂಗಲಿದ್ದಾರೆ. ನಾಳೆ ಬೆಳಗ್ಗೆ ಜೀಪ್ ಹಾಗೂ ಆನೆ ಸಫಾರಿ ಮಾಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಫಾರಿಯ ನಂತರ, ಮೋದಿ ಅವರು ಅರುಣಾಚಲಪ್ರದೇಶಕ್ಕೆ ತೆರಳಲಿದ್ದು, ಅಲ್ಲಿ ಅವರು ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಮತ್ತೆ ಅಸ್ಸಾಂಗೆ ಆಗಮಿಸಿ 125 ಅಡಿ ಎತ್ತರದ ಶೌರ್ಯ ಪ್ರತಿಮೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಸ್ಥಳದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.