ಅಯೋಧ್ಯೆ: ಪ್ರಧಾನ ಯಜಮಾನರಾಗಿ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ ಪ್ರವೇಶಿಸಿದ್ದಾರೆ.
ಪ್ರಾಣ ಪ್ರತಿಷ್ಠಾಪನಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡ ಅವರು ಬಾಲರಾಮದ ಪ್ರಾಣ ಪ್ರತಿಷ್ಠಾಪನೆ ಮಾಡಿ. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಕುಬೇರ ತಿಲಕ್ಕೂ ಭೇಟಿ ನೀಡಲಿದ್ದಾರೆ.
ದೇವಾಲಯದ ನಿರ್ಮಾಣಕ್ಕೆ ಸಂಬಂಧಿಸಿದ 'ಶ್ರಮಜೀವಿ' (ಕಾರ್ಮಿಕರು) ಜೊತೆ ಪ್ರಧಾನ ಮಂತ್ರಿ ಸಂವಾದ ನಡೆಸಲಿದ್ದಾರೆ.
ಕಾರ್ಯಕ್ರಮಗಳ ಪಟ್ಟಿ ಹೀಗಿದೆ
ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ಕಾರ್ಯಕ್ರಮವು 12.20ರಿಂದ 12.45ರವರೆಗೆ ನಡೆಯಲಿದೆ.
ಪ್ರಾಣ ಪ್ರತಿಷ್ಠಾಪನೆಯ ಶುಭ ಮುಹೂರ್ತ ಇರುವುದು 84 ಸೆಕೆಂಡುಗಳಷ್ಟು ಮಾತ್ರ. ಅದು 12 ಗಂಟೆ 29 ನಿಮಿಷ 8 ಸೆಕೆಂಡುಗಳಿಂದ 12 ಗಂಟೆ 30 ನಿಮಿಷ 32 ಸೆಕೆಂಡುಗಳವರೆಗೆ ಇರಲಿದೆ
ಮಹಾವಿಷ್ಣುವಿನ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುರುವಾಗಲಿದೆ
ಪುರೋಹಿತರು ಮಂತ್ರಗಳ ಮೂಲಕ ಶ್ರೀರಾಮನನ್ನು ಆವಾಹನೆ ಮಾಡುತ್ತಾರೆ
ಗರ್ಭಗೃಹದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ವಿಧಿವಿಧಾನಗಳು ನಡೆಯುತ್ತವೆ
ಧಾರ್ಮಿಕ ವಿಧಿವಿಧಾನಗಳನ್ನು 121 ಮಂದಿ ವೈದಿಕ ವಿದ್ವಾಂಸರು, ಆಚಾರ್ಯ ಗಣೇಶ್ವರ ದ್ರಾವಿಡ್ ಮತ್ತು ಆಚಾರ್ಯ ಲಕ್ಷ್ಮೀಕಾಂತ ದ್ವಿವೇದಿ ಮಾರ್ಗದರ್ಶನದಲ್ಲಿ ನಡೆಸಲಿದ್ದಾರೆ
ಪ್ರಾಣ ಪ್ರತಿಷ್ಠಾಪನೆಯ ನಂತರದಲ್ಲಿ, ಅಯೋಧ್ಯೆಯಲ್ಲಿ ಸೋಮವಾರ ಸಂಜೆ ದೀಪೋತ್ಸವ ನಡೆಯಲಿದೆ. ಒಟ್ಟು ಹತ್ತು ಲಕ್ಷ ಹಣತೆಗಳನ್ನು ಬೆಳಗಿಸಲಾಗುತ್ತದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.