ADVERTISEMENT

1893ರ ಷಿಕಾಗೊ ವಿಶ್ವ ಧರ್ಮ ಸಮ್ಮೇಳನ: ಸ್ವಾಮಿ ವಿವೇಕಾನಂದರನ್ನು ಸ್ಮರಿಸಿದ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಸೆಪ್ಟೆಂಬರ್ 2024, 7:00 IST
Last Updated 11 ಸೆಪ್ಟೆಂಬರ್ 2024, 7:00 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

– ರಾಯಿಟರ್ಸ್ ಚಿತ್ರ

ನವದೆಹಲಿ:1893ರಲ್ಲಿ ಷಿಕಾಗೊದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ ಭಾಷಣವನ್ನು ನೆನಪಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಅವರ ಮಾತುಗಳು ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿದಾಯಕ ಎಂದು ತಿಳಿಸಿದ್ದಾರೆ.

ADVERTISEMENT

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಸ್ವಾಮಿ ವಿವೇಕಾನಂದ ಅವರ ತತ್ವಾದರ್ಶಗಳು ನಮಗೆ ಪ್ರೇರಣೆಯಾಗಿದೆ. ಭಾರತದ ಶಾಂತಿ, ಸೋದರತ್ವ ಸಂದೇಶವನ್ನು ಜಗತ್ತಿಗೆ ಸಾರಿದರು. ಒಗ್ಗಟ್ಟಿನಲ್ಲಿ ಶಕ್ತಿ ಇದೆ ಎಂಬ ಅವರ ಮಾತುಗಳು ಸಾಮರಸ್ಯದ ಪಾಠವನ್ನು ನೆನಪಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

1893 ರಲ್ಲಿ ಈ ದಿನದಂದು(ಸೆ.11) ಷಿಕಾಗೊದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಭಾಗಿಯಾಗಿದ್ದರು.

ಬೇಲೂರು ಮಠದ ಅಧಿಕೃತ ವೆಬ್‌ಸೈಟ್‌ ಲಿಂಕ್ ಅನ್ನು ಹಂಚಿಕೊಳ್ಳುವ ಮೂಲಕ ಸ್ವಾಮಿ ವಿವೇಕಾನಂದರ ಭಾಷಣವನ್ನು ಪ್ರಧಾನಿ ಮೋದಿ ಸ್ಮರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.