ಸಮರ್ಕಂಡ್ (ಉಜ್ಬೇಕಿಸ್ತಾನ): ಉಜ್ಬೇಕಿಸ್ತಾನದ ಸಮರ್ಕಂಡ್ ನಗರದಲ್ಲಿ ಶುಕ್ರವಾರ ನಡೆದ ಶಾಂಘೈ ಸಹಕಾರ ಸಂಘಟನೆಯ ವಾರ್ಷಿಕ ಶೃಂಗಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಭೆ ನಡೆಸಿದರು. ಈ ವೇಳೆ ಪುಟಿನ್ ಅವರು ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.
‘ನಾನು ಭಾರತಕ್ಕೆ ಶುಭ ಹಾರೈಸುತ್ತೇನೆ. ನನ್ನ ಆತ್ಮೀಯ ಗೆಳೆಯ, ನೀವು (ಮೋದಿ) ನಾಳೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವುದು ನನಗೆ ತಿಳಿದಿದೆ. ರಷ್ಯಾದ ಸಂಪ್ರದಾಯದ ಪ್ರಕಾರ, ನಾವು ಎಂದಿಗೂ ಮುಂಚಿತವಾಗಿ ಅಭಿನಂದನೆಗಳನ್ನು ನೀಡುವುದಿಲ್ಲ. ಹಾಗಾಗಿ ಈಗ ನಾನು ಹಾಗೆ ಮಾಡಲಾರೆ. ಆದರೆ ನಾನು ನಿಮಗೆ ಶುಭ ಹಾರೈಸುತ್ತೇವೆ. ಸೌಹಾರ್ದಯುತ ಭಾರತಕ್ಕಾಗಿ ನಾನು ಶುಭ ಹಾರೈಸುತ್ತೇನೆ... ನಿಮ್ಮ ನಾಯಕತ್ವದಲ್ಲಿ ಭಾರತವು ಸಮೃದ್ಧವಾಗಲೆಂದು ಬಯಸುತ್ತೇನೆ’ ಎಂದು ರಷ್ಯಾ ಅಧ್ಯಕ್ಷ ಪುಟಿನ್ ಶುಭ ಕೋರಿದ್ದಾರೆ.
ರಷ್ಯಾ ಮತ್ತು ಭಾರತದ ನಡುವಿನ ಸಂಬಂಧಗಳು ಅತ್ಯಂತ ವೇಗವಾಗಿ ಬೆಳೆಯುತ್ತಿವೆ. ಕಾರ್ಯತಂತ್ರದ ವಿಶೇಷ ಪಾಲುದಾರಿಕೆಯ ಸ್ವರೂಪವನ್ನು ಹೊಂದಿವೆ ಎಂದು ಪುಟಿನ್ ಹೇಳಿದರು. ಉಭಯ ದೇಶಗಳು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ ಎಂದು ಪ್ರತಿಪಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.