ADVERTISEMENT

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

ಪಿಟಿಐ
Published 5 ಜೂನ್ 2024, 9:43 IST
Last Updated 5 ಜೂನ್ 2024, 9:43 IST
<div class="paragraphs"><p>ನರೇಂದ್ರ ಮೋದಿ,&nbsp;ದ್ರೌಪದಿ ಮುರ್ಮು</p></div>

ನರೇಂದ್ರ ಮೋದಿ, ದ್ರೌಪದಿ ಮುರ್ಮು

   

ನವದೆಹಲಿ: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಬುಧವಾರ ರಾಜೀನಾಮೆ ಸಲ್ಲಿಸಿದರು.

ತಮ್ಮ ಸಂಪುಟ ಸಹದ್ಯೋಗಿಗಳ ಜೊತೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜೀನಾಮೆ ಪತ್ರ ಸ್ವೀಕರಿಸಿದ ದ್ರೌಪದಿ ಮುರ್ಮು ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೂ ಪ್ರಧಾನಿಯಾಗಿ ಮುಂದುವರಿಯುವಂತೆ ಅವರು ಸೂಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.

ADVERTISEMENT

ನಿನ್ನೆ ಕೇಂದ್ರ ಸಚಿವ ಸಂಪುಟವು 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಿತ್ತು. ಪ್ರಸ್ತುತ 17ನೇ ಲೋಕಸಭೆ ಅವಧಿ ಜೂನ್ 16ರಂದು ಕೊನೆಗೊಳ್ಳಲಿದೆ.

ಲೋಕಸಭಾ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಂದಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಹುಮತವನ್ನು ಪಡೆದುಕೊಂಡಿದೆ. 

543 ಸ್ಥಾನಗಳಲ್ಲಿ ಎನ್‌ಡಿಎ 292 ಸ್ಥಾನಗಳನ್ನು ಪಡೆದುಕೊಂಡಿದೆ. 240 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ, 2014ರ ನಂತರ ಮೊದಲ ಬಾರಿಗೆ ಮ್ಯಾಜಿಕ್ ಸಂಖ್ಯೆ (272) ಗಿಂತ ಕಡಿಮೆ ಸ್ಥಾನಗಳನ್ನು ಪಡೆದಿದೆ. ಸರ್ಕಾರ ರಚನೆಗೆ ತನ್ನ ಮಿತ್ರಪಕ್ಷಗಳನ್ನು ಅವಲಂಬಿಸಿದೆ.

ಇಂಡಿಯಾ ಮೈತ್ರಿಕೂಟದ ಭಾಗವಾದ ಕಾಂಗ್ರೆಸ್‌ 99 ಸ್ಥಾನಗಳನ್ನು ಗೆದ್ದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.