ನವದೆಹಲಿ: ಭಾರತ–ಆಸಿಯಾನ್ ವರ್ಚುವಲ್ ಶೃಂಗಸಭೆಯು ಗುರುವಾರ ನಡೆಯಲಿದ್ದು,ಪ್ರಧಾನಿ ನರೇಂದ್ರ ಮೋದಿ ಅವರು ಸಹ ಅಧ್ಯಕ್ಷತೆವಹಿಸಲಿದ್ದಾರೆ.
ಭಾರತ ಮತ್ತು 10 ಆಗ್ನೇಯ ಏಷ್ಯಾದ ರಾಷ್ಟ್ರಗಳು ಈ ಸಭೆಯಲ್ಲಿ ಭಾಗವಹಿಸಲಿದ್ದು, ಈ ವೇಳೆ ರಾಷ್ಟ್ರಗಳು ಕೊರೊನಾ ಪಿಡುಗಿನಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಬೇಕಾದ ಕ್ರಮ ಮತ್ತು ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.