ಸೂರತ್: ಪ್ರಧಾನಿ ನರೇಂದ್ರ ಮೋದಿ ಇಂದು 'ಸೂರತ್ ಡೈಮಂಡ್ ಬೋರ್ಸ್' (ಎಸ್‌ಡಿಬಿ) ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಇದು ಅಂತರರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯವಹಾರಕ್ಕೆ ವಿಶ್ವದ ಅತಿ ದೊಡ್ಡ ಮತ್ತು ಆಧುನಿಕ ಕೇಂದ್ರವಾಗಲಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಚಿತ್ರ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ವಜ್ರ ಉದ್ಯಮಕ್ಕೆ ಭಾರಿ ಉತ್ತೇಜನ ಸಿಗಲಿದೆ ಎಂದು ಹೇಳಿದ್ದಾರೆ.
ಇದು 'ಕಸ್ಟಮ್ ಕ್ಲಿಯರೆನ್ಸ್ ಹೌಸ್', ಜ್ಯುವೆಲ್ಲರಿ ಮಾಲ್, ಇಂಟರ್‌ನ್ಯಾಷನಲ್ ಬ್ಯಾಂಕಿಂಗ್ ಮತ್ತು 'ಸೇಫ್ ವಾಲ್ಟ್' ಸೌಲಭ್ಯಗಳನ್ನು ಒಳಗೊಂಡಿರಲಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.