ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವಿಧ ಕಾರ್ಯಕ್ರಮಗಳಲ್ಲಿ ನೀಡಲಾದ ಉಡುಗೊರೆಗಳ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.
ಈ ಉಡುಗೊರೆಗಳ ಹರಾಜಿನ ಬಳಿಕ ಸಂಗ್ರಹವಾದ ಹಣವನ್ನು ಗಂಗಾ ನದಿಯನ್ನು ಸ್ವಚ್ಛಗೊಳಿಸುವ ‘ನಮಾಮಿ ಗಂಗೆ’ ಉಪಕ್ರಮಕ್ಕೆ ಬಳಸಲಾಗುತ್ತದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಪ್ರತಿ ವರ್ಷ, ನಾನು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸ್ವೀಕರಿಸುವ ವಿವಿಧ ಸ್ಮರಣಿಕೆಗಳನ್ನು ಹರಾಜು ಹಾಕುತ್ತೇನೆ. ಹರಾಜಿನ ಆದಾಯವು ‘ನಮಾಮಿ ಗಂಗೆ’ ಉಪಕ್ರಮಕ್ಕೆ ಹೋಗುತ್ತದೆ. ಈ ವರ್ಷದ ಹರಾಜು ಪ್ರಾರಂಭವಾಗಿದೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ನಿಮಗೆ ಆಸಕ್ತಿದಾಯಕವೆಂದು ತೋರುವ ಸ್ಮರಣಿಕೆಗಳನ್ನು ಪಡೆಯಲು ಹರಾಜಿನಲ್ಲಿ ಪಾಲ್ಗೊಳ್ಳಿ’ ಎಂದಿದ್ದಾರೆ.
‘ನಮಾಮಿ ಗಂಗೆ’ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಗಂಗಾ ನದಿಯ ಸಂರಕ್ಷಣೆ ಮತ್ತು ಪುನರುಜ್ಜೀವನಕ್ಕಾಗಿ ಜಾರಿಗೆ ತರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.