ನವದೆಹಲಿ: ಪ್ರಜಾಭುತ್ವವನ್ನು ಬಲಪಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಎಂದು ಜಮ್ಮು ಮತ್ತು ಕಾಶ್ಮೀರ ಜನತೆಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಇಂದು (ಬುಧವಾರ) ಜಮ್ಮು ಮತ್ತು ಕಾಶ್ಮೀರದ 7 ಜಿಲ್ಲೆಗಳ 24 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ‘ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಇಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿರುವ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ. ವಿಶೇಷವಾಗಿ ಯುವ ಜನತೆ ಮತ್ತು ಮೊದಲ ಬಾರಿಗೆ ಮತದಾನ ಮಾಡುವವರು ತಮ್ಮ ಹಕ್ಕು ಚಲಾಯಿಸಿ’ ಎಂದು ಬರೆದುಕೊಂಡಿದ್ದಾರೆ.
ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.