ನವದೆಹಲಿ: ಪ್ರಧಾನಿ ನರೇಂದ್ರಮೋದಿಅವರು ಧಾರ್ಮಿಕಸ್ವಾತಂತ್ರ್ಯಕ್ಕಾಗಿ ಶ್ರಮಿಸುತ್ತಿದ್ದಾರೆಎಂದು ಅಮೆರಿಕ ಅಧ್ಯಕ್ಷಡೊನಾಲ್ಡ್ಟ್ರಂಪ್ ಹೇಳಿದ್ದಾರೆ.
‘ನರೇಂದ್ರ ಮೋದಿ ಮತ್ತು ನಾನು ಧಾರ್ಮಿಕಸ್ವಾತಂತ್ರ್ಯ ವಿಚಾರಕ್ಕೆ ಸಂಬಂಧಿಸಿ ಮಾತುಕತೆ ನಡೆಸಿದ್ದೇವೆ. ಅವರು (ಮೋದಿ)ಧಾರ್ಮಿಕಸ್ವಾತಂತ್ರ್ಯಕ್ಕಾಗಿ ಶ್ರಮಿಸುತ್ತಿದ್ದಾರೆ’ ಎಂದು ಟ್ರಂಪ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ‘ಕೆಲವು ವ್ಯಕ್ತಿಗಳ ಮೇಲೆ ಹಲ್ಲೆ ನಡೆದಿದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದೆ. ಆದರೆ ಆ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಅದು ಭಾರತಕ್ಕೆ ಸಂಬಂಧಿಸಿದ ವಿಷಯ. ಅದನ್ನವರು ನೋಡಿಕೊಳ್ಳಲಿದ್ದಾರೆ. ಭಾರತದ ಜನರಿಗಾಗಿ ಸರಿಯಾದ ನಿರ್ಧಾರವನ್ನೇ ಅವರು ಕೈಗೊಳ್ಳಲಿದ್ದಾರೆ ಎಂದು ಆಶಿಸುತ್ತೇನೆ’ ಎಂದು ಟ್ರಂಪ್ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ವಿರುದ್ಧದ ಪ್ರತಿಭಟನೆ ವೇಳೆ ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಭುಗಿಲೆದ್ದ ಹಿಂಸಾಚಾರ ಮಂಗಳವಾರ ತಾರಕಕ್ಕೇರಿದ್ದು, 10 ಜನ ಮೃತಪಟ್ಟಿದ್ದಾರೆ. 150 ಜನ ಗಾಯಗೊಂಡಿದ್ದಾರೆ. ಟ್ರಂಪ್ ಭಾರತ ಭೇಟಿ ಸಂದರ್ಭದಲ್ಲೇ ಹಿಂಸಾಚಾರ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.