ADVERTISEMENT

‌ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ: ಕೇಜ್ರಿವಾಲ್ ಹೇಳಿಕೆಗೆ ಅಮಿತ್ ಶಾ ‌

ಪಿಟಿಐ
Published 11 ಮೇ 2024, 13:23 IST
Last Updated 11 ಮೇ 2024, 13:23 IST
<div class="paragraphs"><p>ಅಮಿತ್ ಶಾ</p></div>

ಅಮಿತ್ ಶಾ

   

ಪಿಟಿಐ

ಹೈದರಬಾದ್‌: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಗೃಹಸಚಿವ ಅಮಿತ್ ಶಾ ಅವರು ಅರವಿಂದ ಕೇಜ್ರಿವಾಲ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ಈ ವರ್ಷ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡುತ್ತಿದ್ದು, ಪಕ್ಷದ ನಿಯಮದ ಪ್ರಕಾರ ಅವರು ಪ್ರಧಾನಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಮೋದಿ ಬದಲು ಅಮಿತ್ ಶಾ ಪ್ರಧಾನಿಯಾಗುತ್ತಾರೆ. ಶಾ ಪರ ಮೋದಿ ಮತಯಾಚಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದರು.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ, ‘ಮೋದಿ ಅವರಿಗೆ 75 ತುಂಬುತ್ತಿರುವುದಕ್ಕೆ ನೀವು(ಕೇಜ್ರಿವಾಲ್‌) ಸಂತೋಷಪಡುವ ಅಗತ್ಯವಿಲ್ಲ. 75 ವರ್ಷ ಆದ ನಂತರ ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಬಿಜೆಪಿಯ ಸಂವಿಧಾನದಲ್ಲಿ ಎಲ್ಲಿಯೂ ಬರೆದಿಲ್ಲ. ಮೋದಿ ಅವರು ತಮ್ಮ ಆಡಳಿತಾವಧಿಯನ್ನು ಪೂರ್ಣಗೊಳಿಸುತ್ತಾರೆ ಮತ್ತು ಮುಂದಿನ ಬಾರಿಯೂ ಅವರೇ ಪ್ರಧಾನಿಯಾಗಿ ಮುಂದುವರೆಯುತ್ತಾರೆ. ಈ ಬಗ್ಗೆ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಹೇಳಿದರು.

‘ಸುಪ್ರೀಂ ಕೋರ್ಟ್‌ನ ಮಧ್ಯಂತರ ಜಾಮೀನನ್ನು ಕ್ಲೀನ್ ಚಿಟ್ ಎಂದು ಕೇಜ್ರಿವಾಲ್ ಭಾವಿಸಿದರೆ, ಕಾನೂನಿನ ಬಗ್ಗೆ ಅವರ ತಿಳುವಳಿಕೆ ನಿಕೃಷ್ಟವಾಗಿದೆ ಎಂದರ್ಥ’ ಎಂದು ಶಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.