ನವದೆಹಲಿ: ಹಣದುಬ್ಬರ ಹಾಗೂ ನಿರುದ್ಯೋಗ ಪ್ರಶ್ನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಲೇಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ರಾಹುಲ್, ಭಾರತ ಜೋಡೊ ಯಾತ್ರೆಯು ಈ ಪ್ರಶ್ನೆಗಳನ್ನು ಕೇಳುತ್ತಲೇ ಇರಲಿದೆ. ಪ್ರಧಾನಿ ಉತ್ತರಿಸಲೇಬೇಕು ಎಂದು ಹೇಳಿದರು.
ಇದನ್ನೂ ಓದಿ:
ಹಣದುಬ್ಬರವು 35 ವರ್ಷಗಳಲ್ಲಿ ಗರಿಷ್ಠಮಟ್ಟದಲ್ಲಿದೆ ಏಕೆ? ನಿರುದ್ಯೋಗವು 45 ವರ್ಷಗಳ ಗರಿಷ್ಠ ಮಟ್ಟದಲ್ಲಿದೆ ಏಕೆ ? ಪರೋಟ ಮೇಲೆ ಶೇ 18 ಮತ್ತು ರೈತರ ಟ್ರ್ಯಾಕ್ಟರ್‌ಗಳ ಮೇಲೆ ಶೇ 12ರಷ್ಟು ಜಿಎಸ್‌ಟಿ ತೆರಿಗೆ ವಿಧಿಸಲಾಗುತ್ತಿದೆ ಏಕೆ ಎಂದು ರಾಹುಲ್ ಪ್ರಶ್ನಿಸಿದರು.
ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆ, ಇಂದು ಆಂಧ್ರಪ್ರದೇಶಕ್ಕೆ ಕಾಲಿಟ್ಟಿದೆ. ಈ ಯಾತ್ರೆಯ ಮೂಲಕ ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಮುಂತಾದ ಸಮಸ್ಯೆಗಳನ್ನು ರಾಹುಲ್ ಗಾಂಧಿ ಎತ್ತಿ ಹಿಡಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.