ADVERTISEMENT

Rajasthan Election 2023: ಮೊದಲ ಬಾರಿಗೆ ಮತದಾನ ಮಾಡುವವರಿಗೆ ಪ್ರಧಾನಿ ಶುಭಾಶಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ನವೆಂಬರ್ 2023, 3:16 IST
Last Updated 25 ನವೆಂಬರ್ 2023, 3:16 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

-ಪಿಟಿಐ ಚಿತ್ರ

ನವದೆಹಲಿ: ರಾಜಸ್ಥಾನ ವಿಧಾನಸಭೆಗೆ ಇಂದು (ಶನಿವಾರ) ಮತದಾನ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಮತದಾನ ಮಾಡುವವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ADVERTISEMENT

‘ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಎಲ್ಲಾ ವಯೋಮಾನದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುವ ಮೂಲಕ ಹೊಸ ದಾಖಲೆ ಮಾಡುವಂತೆ ನಾನು ವಿನಂತಿಸುತ್ತೇನೆ. ಈ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ರಾಜ್ಯದ ಎಲ್ಲಾ ಯುವ ಮತದಾರರಿಗೆ ನನ್ನ ಶುಭಾಶಯಗಳು’ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಬಿರುಸಿನ ಪ್ರಚಾರದ ನಂತರ ಇಂದು ರಾಜಸ್ಥಾನದ 200 ವಿಧಾನಸಭೆ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಅಹಿತಕರ ಘಟನೆಗಳು ನಡೆಯದಂತೆ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಕರಣಾಪುರ ಕ್ಷೇತ್ರದ ಮತದಾನವನ್ನು ಮುಂದೂಡಲಾಗಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 73 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್‌ಪಿ ಶಾಸಕರು ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಸರ್ಕಾರ ರಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.