ದೆಹಲಿ: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ.
ಈ ರೈಲು ರಾಷ್ಟ್ರ ರಾಜಧಾನಿಯಿಂದ ಅಜ್ಮೀರ್ ನಗರವನ್ನು ಸಂಪರ್ಕಿಸಲಿದೆ.
ದೆಹಲಿ ಕಂಟೋನ್ಮೆಂಟ್ ಹಾಗೂ ಅಜ್ಮೇರ್ ನಿಲ್ದಾಣಗಳ ನಡುವಣ ಪ್ರಯಾಣದ ಅವಧಿಯು ಇದೇ ಮಾರ್ಗದಲ್ಲಿ ಸಂಚರಿಸುವ ಶತಾಬ್ದಿ ಎಕ್ಸ್‌ಪ್ರೆಸ್‌ಗಿಂತಲೂ ಒಂದು ತಾಸಿನಷ್ಟು ಕಡಿಮೆಯಾಗಲಿದೆ.
ಈ ರೈಲು 5 ತಾಸು 15 ನಿಮಿಷಗಳಲ್ಲಿ ಗಮ್ಯಸ್ಥಾನ ತಲುಪಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ವಂದೇ ಭಾರತ್ ರೈಲಿನ ಚಾಲನೆಯೊಂದಿಗೆ ರಾಜಸ್ಥಾನದ ಪ್ರಮುಖ ಪ್ರವಾಸಿ ತಾಣಗಳ ಸಂಪರ್ಕದಲ್ಲಿ ಸುಧಾರಣೆಯಾಗಲಿದ್ದು, ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.