ನವದೆಹಲಿ: ಜಿ20 ಶೃಂಗಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಬ್ರೆಜಿಲ್ ದೇಶಕ್ಕೆ ಹಸ್ತಾಂತರಿಸಿದ್ದಾರೆ.
ಅಧಿಕಾರ ದಂಡ (gavel)ವನ್ನು ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡ ಸಿಲ್ವ ಅವರಿಗೆ ಕೊಡುವ ಮೂಲಕ ಜಿ20 ಅಧ್ಯಕ್ಷತೆಯ ಜವಾಬ್ದಾರಿಯನ್ನು ಹಸ್ತಾಂತರಿಸಿದ್ದಾರೆ.
ನವೆಂಬರ್20ರಂದು ಭಾರತದ ಅಧ್ಯಕ್ಷತೆಯ ಅವಧಿ ಮುಕ್ತಾಯವಾಗಲಿದ್ದು, ಡಿಸೆಂಬರ್ 1 ರಿಂದ ಬ್ರೆಜಿಲ್ ಅಧಿಕೃತವಾಗಿ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ.
ಅಧ್ಯಕ್ಷತೆ ಹಸ್ತಾಂತರಿಸಿದ ಬಳಿಕ ಬ್ರೆಜಿಲ್‌ಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.
ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಮಾತನಾಡಿ, ಪ್ರಧಾನಿ ಮೋದಿ ಅವರಿಗೆ ಅಭಿನಂದಿಸಿದ್ದು, ಆರ್ಥಿಕತೆಯನ್ನು ಸದೃಢಗೊಳಿಸಲು ಹೊಸ ವಿಚಾರಗಳಿಗೆ ಧ್ವನಿಯಾಗಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.
ಇದೇ ವೇಳೆ ಅವರು ‘ಸಾಮಾಜಿಕ ಸೇರ್ಪಡೆ, ಹಸಿವಿನ ವಿರುದ್ಧದ ಹೋರಾಟ, ಶಕ್ತಿ ಪರಿವರ್ತನೆ ಮತ್ತು ಸುಸ್ಥಿರ ಅಭಿವೃದ್ಧಿ’ಯನ್ನು ಜಿ20ಯ ಆದ್ಯತೆಗಳಾಗಿ ಪಟ್ಟಿ ಮಾಡಿದ್ದಾರೆ. ಅಲ್ಲದೆ ವಿಶ್ವ ಬ್ಯಾಂಕ್ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿಯು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಬೇಕೆಂದು ನಾವು ಬಯಸುತ್ತೇವೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.