ADVERTISEMENT

ಗೋವಾ: ಅಖಿಲ ಭಾರತ ಆಯುರ್ವೇದ ಸಂಸ್ಥೆಗೆ ಪ್ರಧಾನಿ ಮೋದಿ ಚಾಲನೆ

ಪಿಟಿಐ
Published 11 ಡಿಸೆಂಬರ್ 2022, 14:21 IST
Last Updated 11 ಡಿಸೆಂಬರ್ 2022, 14:21 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಮುಂಬೈ: ಗೋವಾದ ಧಾರ್ಗಲ್‌ನಲ್ಲಿ ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು (ಎಐಐಎ) ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉದ್ಘಾಟಿಸಿದರು.

ವಿಶ್ವ ಆಯುರ್ವೇದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವ ಪ್ರಧಾನಿ ಅವರು ಸಂಸ್ಥೆಯನ್ನು ಉದ್ಘಾಟಿಸಿದರು. ಈ ಸಮ್ಮೇಳನದಲ್ಲಿ 50 ದೇಶಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ಪ್ರಧಾನಿ ಅವರು ಬಳಿಕ ಗೋವಾದ ಮೋಪಾದಲ್ಲಿ ನಿರ್ಮಿಸಲಾಗಿರುವಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು. ಈ ವಿಮಾನನಿಲ್ದಾಣಕ್ಕೆ ಮನೋಹರ್ ಪರಿಕ್ಕರ್ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಈ ಮೂಲಕ ಗೋವಾದಲ್ಲಿ ಕೇವಲ 50 ಕಿ.ಮೀ.ಅಂತರದಲ್ಲಿ ಎರಡು ಅಂತರರಾಷ್ಟ್ರೀಯ ವಿಮಾನನಿಲ್ದಾಣಗಳು ತಲೆ ಎತ್ತಿದಂತಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.