ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಸೇರಿದಂತೆ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.
ವಿಮಾನ ನಿಲ್ದಾಣದ ಮೊದಲ ಹಂತವನ್ನು ₹1450 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು 6,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರಿಗೆ ಸೇವೆ ಒದಗಿಸಲಿದೆ.
ನವದೆಹಲಿ: ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಅಯೋಧ್ಯೆಯಿಂದ ಬೆಂಗಳೂರು ಮತ್ತು ಕೋಲ್ಕತ್ತ ನಗರಗಳಿಗೆ ಜ.17ರಿಂದ ನೇರ ವಿಮಾನ ಸೇವೆ ಆರಂಭಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅಯೋಧ್ಯೆ– ನವದೆಹಲಿ ಮಾರ್ಗದಲ್ಲಿ ವಿಮಾನ ಸೇವೆ ಆರಂಭವಾಗಲಿದೆ ಎಂದು ಏರ್ ಇಂಡಿಯಾ ಈ ಹಿಂದೆಯೇ ಪ್ರಕಟಿಸಿದ್ದು, ಈ ಮಾರ್ಗದಲ್ಲಿ ವಿಮಾನ ಸಂಚಾರಕ್ಕೆ ಈಚೆಗೆ ಚಾಲನೆ ಲಭಿಸಲಿದೆ.
ಅಯೋಧ್ಯೆ: ಮರುಅಭಿವೃದ್ಧಿಗೊಂಡಿರುವ ಅಯೋಧ್ಯ ಧಾಮ ರೈಲು ನಿಲ್ದಾಣವನ್ನು ಇಂದು ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಎರಡು ಅಮೃತ ಭಾರತ್ ಮತ್ತು ಆರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.
ರೈಲು ನಿಲ್ದಾಣ ಉದ್ಘಾಟನೆಗೂ ಮುನ್ನ ಪ್ರಧಾನಿ ಅವರು ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದವರೆಗೆ ರೋಡ್ ಶೋ ನಡೆಸಿದರು. ರಸ್ತೆಯುದ್ದಕ್ಕೂ ನೆರೆದ ಸಾವಿರಾರು ಜನರು ಅವರಿಗೆ ಸ್ವಾಗತ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.