ADVERTISEMENT

ಕಲ್ಯಾಣ್ ಸಿಂಗ್ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ: ಆದರ್ಶಗಳನ್ನು ಪಾಲಿಸಲು ಕರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಆಗಸ್ಟ್ 2021, 8:15 IST
Last Updated 22 ಆಗಸ್ಟ್ 2021, 8:15 IST
ಕಲ್ಯಾಣ್‌ ಸಿಂಗ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. (ಪಿಟಿಐ ಚಿತ್ರ)
ಕಲ್ಯಾಣ್‌ ಸಿಂಗ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. (ಪಿಟಿಐ ಚಿತ್ರ)   

ಲಖನೌ: ನಾವೊಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿದ್ದೇವೆ. ಅವರ ಆದರ್ಶನಗಳನ್ನು ನಾವು ಪಾಲಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶನಿವಾರ ರಾತ್ರಿ ನಿಧನರಾದ ಬಿಜೆಪಿ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಅವರ ಕುಟುಂಬದವರಿಗೆ ಮೋದಿ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಅಗಲಿದ ನಾಯಕನ ಗುಣಗಾನ ಮಾಡಿದರು.

‘ನಾವೊಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿದ್ದೇವೆ. ಅವರು ಪಾಲಿಸಿಕೊಂಡು ಬಂದಿದ್ದ ಮೌಲ್ಯಗಳನ್ನು ಮತ್ತು ನಿರ್ಣಯಗಳನ್ನು ಅನುಸರಿಸುವ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕು. ಅವರ ಕನಸುಗಳು ಸಾಕಾರಗೊಳ್ಳುವಂತೆ ಮಾಡಬೇಕು’ ಎಂದು ಪ್ರಧಾನಿ ಹೇಳಿದ್ದಾರೆ.

‘ಪ್ರಭು ರಾಮನು ತನ್ನ ಚರಣಗಳಲ್ಲಿ ಕಲ್ಯಾಣ್ ಸಿಂಗ್ ಅವರಿಗೆ ಸ್ಥಾನ ನೀಡಲಿ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.