ADVERTISEMENT

ಪ್ರಧಾನಿ ಮೋದಿ ಮೊದಲು ಕೋವಿಡ್–19 ಲಸಿಕೆ ಪಡೆಯಲಿ: ತೇಜ್ ಪ್ರತಾಪ್ ಯಾದವ್

ಏಜೆನ್ಸೀಸ್
Published 8 ಜನವರಿ 2021, 8:03 IST
Last Updated 8 ಜನವರಿ 2021, 8:03 IST
   

ನವದೆಹಲಿ: ರಾಷ್ಟ್ರೀಯ ಜನತಾದಳ ಪಕ್ಷದ (ಆರ್‌ಜೆಡಿ) ನಾಯಕ ತೇಜ್‌ ಪ್ರತಾಪ್‌ ಯಾದವ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಕೋವಿಡ್–19 ಲಸಿಕೆಯನ್ನು ಪಡೆಯಲಿ. ಬಳಿಕ ಉಳಿದವರು ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕರಾದ ಮನೀಶ್‌ ತಿವಾರಿ, ಶಶಿ ತರೂರ್‌, ಜೈರಾಮ್‌ ರಮೇಶ್‌ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಸೇರಿದಂತೆ ಪ್ರತಿಪಕ್ಷಗಳ ಹಲವು ನಾಯಕರು ಭಾರತ್‌ ಬಯೋಟೆಕ್‌ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್‌ ಲಸಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಬಿಹಾರ ನಾಯಕ ತೇಜ್‌ ಪ್ರತಾಪ್,‌ ‘ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಕೋವಿಡ್–19 ಲಸಿಕೆ ಪಡೆಯಲಿ. ನಂತರ ನಾವೂ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು, ರಾಜ್ಯದಾದ್ಯಂತ ಕೋವಿಡ್–19 ಲಸಿಕೆ ಹಾಕಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಂಗಳವಾರ ಹೇಳಿದ್ದರು.‘ಬಿಹಾರದಲ್ಲಿ ಲಸಿಕೆ ವಿತರಿಸಲು ಸಿದ್ಧರಿದ್ದೇವೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಲಸಿಕೆ ಹಾಕಲಾಗುವುದು’ ಎಂದು ತಿಳಿಸಿದ್ದರು.

ADVERTISEMENT

ಅತ್ಯಂತ ಕಡಿಮೆ ಅವಧಿಯಲ್ಲಿ ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸುವ ಮೂಲಕ ಭಾರತವು ಉತ್ತಮ ಸಾಧನೆ ಮಾಡಿದೆ. ಮುಂದಿನ ಕೆಲವು ದಿನಗಳಲ್ಲಿ ನಾವು ಈ ಲಸಿಕೆಗಳನ್ನು ದೇಶವಾಸಿಗಳಿಗೆ ನೀಡಲು ಸಾಧ್ಯವಾಗುತ್ತದೆ. ಇದನ್ನು ಮೊದಲು ನಮ್ಮ ಆರೋಗ್ಯ ಸಿಬ್ಬಂದಿಗಳಿಗೆ ಹಾಗೂ ಮುಂಚೂಣಿಯ ಸೇನಾನಿಗಳಿಗೆ ನೀಡಲಿದ್ದೇವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಇಂದು (ಶುಕ್ರವಾರ) ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.