ADVERTISEMENT

ಆಯುಷ್ಮಾನ್‌ ಭಾರತ: 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆಗೆ ಮಂಗಳವಾರ ಚಾಲನೆ?

ಪಿಟಿಐ
Published 27 ಅಕ್ಟೋಬರ್ 2024, 14:34 IST
Last Updated 27 ಅಕ್ಟೋಬರ್ 2024, 14:34 IST
.
.   

ನವದೆಹಲಿ: 70 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಆಯುಷ್ಮಾನ್‌ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ–ಪಿಎಂಜೆಎವೈ) ಅಡಿಯಲ್ಲಿ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್‌ 29ರಂದು ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪುನರಾವರ್ತಿತ ಲಸಿಕೆಗಳ ಎಲೆಕ್ಟ್ರಾನಿಕ್‌ ನೋಂದಣಿ ಉದ್ದೇಶದಿಂದ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಯು–ವಿನ್‌ ಪೋರ್ಟಲ್‌ ಯೋಜನೆ ಸೇರಿದಂತೆ ಹಲವು ಯೋಜನೆಗಳಿಗೂ ಪ್ರಧಾನಿ ಚಾಲನೆ ನೀಡಲಿದ್ದಾರೆ. ಗರ್ಭಿಣಿ ಮತ್ತು ಮಕ್ಕಳಿಗೆ ನೀಡಲಾಗುವ ಲಸಿಕೆಗಳ ಶಾಶ್ವತ ನೋಂದಣಿಗಾಗಿ ಯು–ವಿನ್‌ ವೇದಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ.

ಆದಾಯ ಸ್ಥಿತಿಗತಿಯನ್ನು ಹೊರತುಪಡಿಸಿ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಆಯುಷ್ಮಾನ್‌ ಭಾರತ ಯೋಜನೆಯಡಿ ವಿಮೆ ಸೌಲಭ್ಯ ಒದಗಿಸುವುದರಿಂದ ಅಂದಾಜು 6 ಕೋಟಿ ಜನರಿಗೆ, ಸರಿಸುಮಾರು 4.5 ಕೋಟಿ ಕುಟುಂಬಗಳಿಗೆ ನೆರವಾಗಲಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಬಡವರು, ಶ್ರೀಮಂತರು ಎನ್ನದೆ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ. ಇವರು ವಾರ್ಷಿಕ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ಪ್ರಸಕ್ತ ವರ್ಷ ಸೆಪ್ಟೆಂಬರ್‌ 1ರವರೆಗೆ 12,696 ಖಾಸಗಿ ಆಸ್ಪತ್ರೆಗಳು ಸೇರಿದಂತೆ 29,648 ಆಸ್ಪತ್ರೆಗಳು ಎಬಿ–ಪಿಎಂಜೆಎವೈ ಯೋಜನೆಗೆ ಒಳಪಟ್ಟಿವೆ. ದೇಶದ 33 ರಾಜ್ಯಗಳಲ್ಲಿ ಯೋಜನೆಯು ಅನುಷ್ಠಾನಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.