ನವದೆಹಲಿ: ಕೋವಿಡ್ 19 ಪಾಸಿಟಿವ್ ಪ್ರಕರಣ ಹೆಚ್ಚಿರುವ ರಾಜ್ಯ ಮತ್ತು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಭೆ ನಡೆಸಲಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಮಾರ್ಗೋಪಾಯಗಳು, ಕೈಗೊಂಡ ಕ್ರಮಗಳು ಮತ್ತು ಮುಂದಿನ ಯೋಜನೆ ಕುರಿತು ಪ್ರಧಾನಿ ಜಿಲ್ಲಾಧಿಕಾರಿಗಳು ಚರ್ಚಿಸಲಿದ್ದಾರೆ. ನಗರ ಪ್ರದೇಶಕ್ಕಿಂತ, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸೋಂಕು ಪ್ರಕರಣ ವರದಿಯಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಕರ್ನಾಟಕ, ಬಿಹಾರ, ಅಸ್ಸಾಂ, ಚಂಡೀಗಢ, ತಮಿಳುನಾಡು, ಉತ್ತರಾಖಂಡ, ಮಧ್ಯ ಪ್ರದೇಶ, ಗೋವಾ, ಹಿಮಾಚಲ ಪ್ರದೇಶ ಮತ್ತು ದೆಹಲಿಯ ಜಿಲ್ಲಾಧಿಕಾರಿಗಳು ಪ್ರಧಾನಿ ಜತೆಗಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಒಂಭತ್ತು ಜಿಲ್ಲೆಗಳ 46 ಜಿಲ್ಲಾ ಮ್ಯಾಜಿಸ್ಟ್ರೇಟರ್‌ಗಳು ಕೂಡ ಮಂಗಳವಾರದ ಸಭೆಯಲ್ಲಿ ಭಾಗಿಯಾಗುತ್ತಾರೆ ಎಂದು ಪ್ರಧಾನಿ ಕಚೇರಿ ಹೇಳಿದೆ.
ಮೇ 20, ಗುರುವಾರ ಕೂಡ 10 ರಾಜ್ಯಗಳ 54 ಜಿಲ್ಲೆಗಳ ಉನ್ನತ ಅಧಿಕಾರಿಗಳ ಜತೆಗೆ ಪ್ರಧಾನಿ ಮೋದಿ ಸಭೆ ನಿಗದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.