ADVERTISEMENT

ಮೋದಿ ಕಚೇರಿಯನ್ನೇ ಒಎಲ್‌ಎಕ್ಸ್‌ನಲ್ಲಿ ಮಾರಾಟಕ್ಕಿಟ್ಟರು!

ಪಿಟಿಐ
Published 18 ಡಿಸೆಂಬರ್ 2020, 12:02 IST
Last Updated 18 ಡಿಸೆಂಬರ್ 2020, 12:02 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ವಾರಾಣಸಿ (ಉತ್ತರ ಪ್ರದೇಶ): ನಾಲ್ವರು ಯುವಕರು ಪ್ರಧಾನಿ ನರೇಂದ್ರ ಮೋದಿ ಅವರ ವಾರಾಣಸಿ ಕಚೇರಿಯನ್ನೇ ಒಎಲ್‌ಎಕ್ಸ್‌ನಲ್ಲಿ ಮಾರಾಟಕ್ಕಿಟ್ಟಿದ್ದಾರೆ!

ಈ ವಿಷಯ ಗೊತ್ತಾದ ಕೂಡಲೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಶುಕ್ರವಾರ ನಾಲ್ವರನ್ನು ಬಂಧಿಸಿದ್ದಾರೆ.

‘ಜವಾಹರ್‌ ನಗರದಲ್ಲಿರುವ ಪ್ರಧಾನಿಯವರ ಜನಸಂಪರ್ಕ ಕಾರ್ಯಾಲಯದ ಫೋಟೊ ಕ್ಲಿಕ್ಕಿಸಿಕೊಂಡಿದ್ದ ಆರೋಪಿಯೊಬ್ಬ ಅದನ್ನು ಒಎಲ್‌ಎಕ್ಸ್‌ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಿದ್ದ. ಈ ಕಚೇರಿ ಮಾರಾಟಕ್ಕಿದೆ ಎಂದೂ ಉಲ್ಲೇಖಿಸಿದ್ದ. ಈ ವಿಷಯ ಗುರುವಾರ ನಮ್ಮ ಗಮನಕ್ಕೆ ಬಂದಿತ್ತು. ಕೂಡಲೇ ಭೇಲುಪುರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು’ ಎಂದು ವಾರಾಣಸಿಯ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಅಮಿತ್‌ ಪಾಠಕ್ ಮಾಹಿತಿ ನೀಡಿದ್ದಾರೆ.

ADVERTISEMENT

‘ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರ ವಿರುದ್ಧ ಕಾನೂನುರೀತ್ಯ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.

ಮೋದಿ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. 2019ರಲ್ಲಿ ಇದೇ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಕಣಕ್ಕಿಳಿದಿದ್ದ ಅವರು ಜಯಶಾಲಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.